
Mangalore: ಜು.12 ರಂದು ಸಂಸದರ ಕಚೇರಿ ಉದ್ಘಾಟನೆ
Thursday, July 11, 2024
ಮಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಸಂಸದರಾದ ಕ್ಯಾ. ಬ್ರಿಜೇಶ್ ಚೌಟ ಅವರ ನೂತನ ಕಾರ್ಯಾಲಯವು ಜು.12 ರಂದು ಬೆಳಗ್ಗೆ 9.30ಕ್ಕೆ ಜಿಲ್ಲಾಧಿಕಾರಿ ಕಚೇರಿಯ 2ನೇ ಮಹಡಿಯಲ್ಲಿ ಉದ್ಘಾಟನೆಗೊಳ್ಳಲಿದೆ.
ವಿಕಸಿತ ಭಾರತಕ್ಕಾಗಿ ವಿಕಸಿತ ದಕ್ಷಿಣ ಕನ್ನಡ ನಿರ್ಮಾಣದ ಸಂಕಲ್ಪಕ್ಕೆ ಈ ಕಾರ್ಯಾಲಯವು ಪ್ರೇರಣಾಧಾಮವಾಗಲಿದೆ. ಕ್ಷೇತ್ರದ ಕಟ್ಟ ಕಡೆಯ ವ್ಯಕ್ತಿಗೂ ಈ ಕಚೇರಿಯು ಸಹಕಾರಿಯಾಗಲಿದೆ. ಕ್ಷೇತ್ರದ ಜನರ ಮತ್ತು ಸಂಸದರ ನಡುವೆ ಕೊಂಡಿಯಾಗಿ ಕಚೇರಿಯು ಕಾರ್ಯನಿರ್ವಹಿಸಲಿದ್ದು, ಜಿಲ್ಲೆಯ ಜನರು ಕಚೇರಿಯನ್ನು ಸದುಪಯೋಗಪಡಿಸುವಂತೆ ಹಾಗೂ ಜಿಲ್ಲೆಯನ್ನು ಇನ್ನಷ್ಟು ಅಭಿವೃದ್ಧಿ ಪಡಿಸುವ ನಿಟ್ಟಿನಲ್ಲಿ ತಮ್ಮ ಸಹಕಾರವನ್ನು ನೀಡುವಂತೆ ಸಂಸದರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.