Mangalore: ಜು.20ರಂದು ಎಸ್ ಸಿಡಿಸಿಸಿ ಬ್ಯಾಂಕ್‌ನಲ್ಲಿ  ಪ್ರತಿಭಾ ಪುರಸ್ಕಾರ

Mangalore: ಜು.20ರಂದು ಎಸ್ ಸಿಡಿಸಿಸಿ ಬ್ಯಾಂಕ್‌ನಲ್ಲಿ ಪ್ರತಿಭಾ ಪುರಸ್ಕಾರ

ಮಂಗಳೂರು: ಸಹಕಾರಿ ಪಿತಾಮಹ ದಿ. ಮೊಳಹಳ್ಳಿ ಶಿವರಾವ್ ಸ್ಮರಣಾರ್ಥವಾಗಿ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಜುಲೈ 20ರಂದು ಎಸ್ ಸಿಡಿಸಿಸಿ ಬ್ಯಾಂಕಿನ ಪ್ರಧಾನ ಕಚೇರಿಯ ಮೊಳಹಳ್ಳಿ ಶಿವರಾವ್ ಸಭಾಭವನದಲ್ಲಿ ಅಪರಾಹ್ನ ೪ಗಂಟೆಗೆ ನಡೆಯಲಿದೆ.

2023-2024ನೇ ಸಾಲಿನಲ್ಲಿ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಎಸ್ ಎಸ್ ಎಲ್ ಸಿ  ಹಾಗೂ ಪದವಿಪೂರ್ವ ಪರೀಕ್ಷೆಗಳಲ್ಲಿ ಅತ್ಯಧಿಕ ಅಂಕಗಳಿಸಿ ಸಾಧನೆಗೈದ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ ಪ್ರತಿಭಾ ಪುರಸ್ಕಾರ ಮತ್ತು ಬ್ಯಾಂಕಿನ ಸಿಬ್ಬಂದಿಗಳ ಮಕ್ಕಳ ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿವೇತನ ವಿತರಣೆ ಈ ಸಮಾರಂಭದಲ್ಲಿ ನಡೆಯಲಿದೆ.

ಕಣಚೂರು ವೈದ್ಯಕೀಯ ವಿಜ್ಞಾನ ಸಂಸ್ಥೆ ಮಂಗಳೂರು ಇದರ ಅಧ್ಯಕ್ಷರಾದ  ಡಾ|  ಯು.ಕೆ. ಮೋನು ಇವರು ಪ್ರತಿಭಾ ಪುರಸ್ಕಾರವನ್ನು ನೆರವೇರಿಸಿ, ಉತ್ತಮ ಸಾಧನೆಗೈದ ವಿದ್ಯಾರ್ಥಿ-ವಿದ್ಯಾರ್ಥಿನಿಯರನ್ನು ಸನ್ಮಾನಿಸಲಿರುವರು. ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ಹಾಗೂ ಎಸ್ಸಿಡಿಸಿಸಿ ಬ್ಯಾಂಕಿನ ಅಧ್ಯಕ್ಷರಾದ ಡಾ| ಎಂ.ಎನ್. ರಾಜೇಂದ್ರ ಕುಮಾರ್ ಅವರು ಸಮಾರಂಭದ ಅಧ್ಯಕ್ಷತೆ ವಹಿಸಲಿರುವರು ಎಂದು ಬ್ಯಾಂಕಿನ ಪ್ರಕಟಣೆ ತಿಳಿಸಿದೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article