.jpeg)
Mangalore: ಜು.6 ರಂದು ವಿಶೇಷ ಜಿಲ್ಲಾ ಕಾರ್ಯಕಾರಿಣಿ ಸಭೆ
Thursday, July 4, 2024
ಮಂಗಳೂರು: ಭಾರತೀಯ ಜನತಾ ಪಾರ್ಟಿಯ ದಕ್ಷಿಣ ಕನ್ನಡ ಜಿಲ್ಲಾ ವಿಶೇಷ ಕಾರ್ಯಕಾರಿಣಿ ಸಭೆ ಜು.6 ರಂದು ಮಂಗಳೂರಿನ ಸಂಘನಿಕೇತನದಲ್ಲಿ ಬೆಳಿಗ್ಗೆ 10.30 ಕ್ಕೆ ನಡೆಯಲಿದೆ ಎಂದು ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸಭೆಯಲ್ಲಿ ಸಂಸದ ಕ್ಯಾ. ಬ್ರಿಜೇಶ್ ಚೌಟ, ನೈರುತ್ಯ ಪಧವೀದರ ಕ್ಷೇತ್ರದ ಶಾಸಕ ಡಾ. ಧನಂಜಯ ಸರ್ಜಿ, ನೈರುತ್ಯ ಪಧವೀದರ ಕ್ಷೇತ್ರದ ಶಾಸಕ ಎಸ್.ಎಲ್. ಭೋಜೆ ಗೌಡ ಇವರಿಗೆ ಅಭಿನಂದನಾ ಕಾರ್ಯಕ್ರಮವು ನಡೆಯಲಿದ್ದು, ಈ ಕಾರ್ಯಕ್ರಮದಲ್ಲಿ ರಾಜ್ಯ ನಾಯಕ ವಿಧಾನ ಪರಿಷತ್ ಸದಸ್ಯ ಎನ್. ರವಿಕುಮಾರ್ ಅವರು ಭಾಗವಹಿಸಲಿದ್ದಾರೆ ಹಾಗೂ ಈ ಸಭೆಯಲ್ಲಿ ಜಿಲ್ಲೆಯ ಪ್ರಮುಖ ನಾಯಕರು ಭಾಗವಹಿಸಲಿದ್ದಾರೆ ಎಂದು ಸತೀಶ್ ಕುಂಪಲ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.