Mangalore: ಕೆಎಸ್‌ಆರ್‌ಟಿಸಿ ಬಸ್ಸಿನಲ್ಲಿ 67.75 ಕಳವು

Mangalore: ಕೆಎಸ್‌ಆರ್‌ಟಿಸಿ ಬಸ್ಸಿನಲ್ಲಿ 67.75 ಕಳವು

ಮಂಗಳೂರು: ಕೆಎಸ್‌ಆರ್‌ಟಿಸಿ ಬಸ್ ಪ್ರಯಾಣದಲ್ಲಿದ್ದ ಮಹಿಳೆಯ ಬ್ಯಾಗ್‌ನಲ್ಲಿದ್ದ ಸುಮಾರು 67.75 ಲಕ್ಷ ರೂ. ಮೌಲ್ಯದ ಚಿನ್ನಾಭರಣವನ್ನು ಎಗರಿಸಿರುವ ಬಗ್ಗೆ ಉರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕುಟುಂಬದ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಮಹಿಳೆ ಮಂಗಳೂರಿನಿಂದ ಬೆಂಗಳೂರಿಗೆ ಕೆಎಸ್‌ಆರ್‌ಟಿಸಿ  ಬಸ್ನಲ್ಲಿ ಪ್ರಯಾಣಿಸುತ್ತಿದ್ದರು. ಈ ವೇಳೆ ಅವರು ಕಾರ್ಯಕ್ರಮದಲ್ಲಿ ತೊಡಲೆಂದು ಬ್ಯಾಗ್‌ನಲ್ಲಿ 110ಗ್ರಾಂ ತೂಕದ ವಜ್ರದ ಹರಳುಗಳಿರುವ ವಿವಿಧ ಬಗೆಯ ಚಿನ್ನಾಭರಣಗಳನ್ನೂ ಜೊತೆಗೆ ಕೊಂಡೊಯ್ದಿದ್ದರು. ಈ ಚಿನ್ನಾಭರಣವನ್ನು ತಮ್ಮ ಹ್ಯಾಂಡ್‌ಬ್ಯಾಗ್‌ನಲ್ಲಿರಿಸಿ ಜೂ.29ರಂದು ಬೆಳಗ್ಗೆ 7 ಗಂಟೆಗೆ ಮಂಗಳೂರಿನಿಂದ ಕೆಎಸ್‌ಆರ್ಟಿಸಿ ಐರಾವತ ಬಸ್ಸಿನಲ್ಲಿ ಬೆಂಗಳೂರಿಗೆ ಪ್ರಯಾಣಿಸಿದ್ದರು.

ಹಾಸನ ತಲುಪಿದಾಗ ಅವರ ಹ್ಯಾಂಡ್ ಬ್ಯಾಗ್ ಪರಿಶೀಲಿಸಿದಾಗ ಬ್ಯಾಗ್‌ನಲ್ಲಿಟ್ಟಿದ ಚಿನ್ನಾಭರಣಗಳು ಕಳವಾಗಿತ್ತು. ಮಂಗಳೂರು - ಹಾಸನ ನಡುವೆ ಅವರ ಪಕ್ಕದಲ್ಲಿ ಕುಳಿತು ಪ್ರಯಾಣಿಸುತ್ತಿದ್ದ ನಡು ವಯಸ್ಸಿನ ಮಹಿಳೆ ಕಳವುಗೈದಿರುವ ಸಾಧ್ಯತೆಯಿದೆ ಎಂದು ಚಿನ್ನಾಭರಣ ಕಳೆದುಕೊಂಡ ಮಹಿಳೆ ಉರ್ವ ಪೊಲೀಸರಿಗೆ ದೂರು ನೀಡಿದ್ದಾರೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article