Mangalore: ರಾಜ್ಯ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾವಳಿಯಲ್ಲಿ ದ್ವಿತೀಯ ಸ್ಥಾನ
Monday, July 15, 2024
ಮಂಗಳೂರು: ಸಂತ ಜೋಸೆಫ್ ಇಂಜಿನಿಯರಿಂಗ್ ಕಾಲೇಜು (ಎಸ್.ಜೆ.ಇ.ಸಿ) ಮಹಿಳಾ ಷಟಲ್ ಬ್ಯಾಡ್ಮಿಂಟನ್ ತಂಡವು ಜು.13 ಮತ್ತು 14 ರಂದು ಮಂಡ್ಯದ ಪಿ.ಇ.ಎಸ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ನಡೆದ ವಿಟಿಯು ರಾಜ್ಯ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾವಳಿಯಲ್ಲಿ ದ್ವಿತೀಯ ರನ್ನರ್ ಅಪ್ ಸ್ಥಾನಗಳಿಸಿದೆ.
ದೈಹಿಕ ಶಿಕ್ಷಣ ನಿರ್ದೇಶಕಿ ವನೀಶಾ ವಿ. ರೋಡ್ರಿಗಸ್ ಮತ್ತು ಸಹಾಯಕ ಪಿಇಡಿ ಸುಧೀರ್ ಎಂ ಅವರ ಮಾರ್ಗದರ್ಶನದಲ್ಲಿ ಸಾಧನೆಗಳಿಸಿದೆ. ಈ ಅಗಾಧ ಸಾಧನೆಗಾಗಿ ಎಸ್‌ಜೆಇಸಿಯ ಆಡಳಿತ ಮಂಡಳಿಯು ಮಹಿಳಾ ಷಟಲ್ ಬ್ಯಾಡ್ಮಿಂಟನ್ ತಂಡ ಮತ್ತು ದೈಹಿಕ ಶಿಕ್ಷಣ ನಿರ್ದೇಶಕರನ್ನು ಅಭಿನಂದಿಸಿದೆ.


