
Mangalore: ನೆನೆಗುದಿಗೆ ಬಿದ್ದಿರುವ ಕರಾವಳಿ ಶ್ರೀ ಜಗಜ್ಯೋತಿ ಬಸವೇಶ್ವರ ಸಮುದಾಯ ಭವನ ಪರಿಶೀಲಿಸಿದ ಸಚಿವರು
Sunday, July 14, 2024
ಮಂಗಳೂರು: ಮಂಗಳೂರು ಹೃದಯ ಭಾಗದಲ್ಲಿರುವ ಕರಾವಳಿ ವೀರಶೈವ ಕ್ಷೇಮಾಭಿವೃದ್ಧಿ ಸಂಘದಿಂದ ಸಾಂಸ್ಕೃತಿಕ ನಾಯಕ ಶ್ರೀ ಜಗಜ್ಯೋತಿ ಬಸವೇಶ್ವರ ಸಮುದಾಯ ಭವನದ ನಿರ್ಮಾಣ ಹಂತದ ಕಟ್ಟಡವನ್ನು ಮಹಿಳಾ ಮತ್ತು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಭೇಟಿ ನೀಡಿ ಪರಿಶೀಲಿಸಿದರು.
ಸಚಿವರನ್ನು ಸಂಘದ ಪದಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಮನವಿ ಮಾಡಿಕೊಂಡರು. ಭೇಟಿ ವೇಳೆ ಸಂಘದ ಪದಾಧಿಕಾರಿಗಳು, ಸಮುದಾಯ ಭವನದ ಮುಂದುವರಿದ ಕಾಮಗಾರಿಗೆ ಸರ್ಕಾರದಿಂದ ಧನ ಸಹಾಯ ನೀಡಬೇಕೆಂದು ಸಚಿವರಿಗೆ ಮನವಿ ಸಲ್ಲಿಸಿದರು.
ಸಂಘದ ಅಧ್ಯಕ್ಷ ಶರಣ ಎಚ್.ಎಸ್. ಗುರುಮೂರ್ತಿ ಮತ್ತಿತರರು ಉಪಸ್ಥಿತರಿದ್ದರು.