
Mangalore: ವಿಟಿಯು ರಾಜ್ಯ ಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಸಹ್ಯಾದ್ರಿ ಮಹಿಳೆಯರ ತಂಡ ಪ್ರಥಮ
Tuesday, July 2, 2024
ಮಂಗಳೂರು: ಮೈಸೂರಿನ ಚಾಮುಂಡಿ ವಿಹಾರ ಕ್ರೀಡಾಂಗಣದಲ್ಲಿ ನಡೆದ ವಿಶ್ವೇಶ್ವರಯ್ಯ ತಾಂತ್ರಿಕ ಮಹಾವಿದ್ಯಾಲಯವು ಆಯೋಜಿಸಿದ್ದ 25ನೇ ರಾಜ್ಯ ಮಟ್ಟದ ಅಂತರ ಕಾಲೇಜು ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಸಹ್ಯಾದ್ರಿ ಮಹಿಳೆಯರ ತಂಡವು 65 ಅಂಕಗಳನ್ನು ಗಳಿಸಿ ಚಾಂಪಿಯನ್ ಆಗಿ ಹೊರಹೊಮ್ಮಿದೆ.
ಒಟ್ಟು 82 ಅಂಕಗಳನ್ನು ಗಳಿಸಿ (ಪುರುಷ ಮತ್ತು ಮಹಿಳಾ ಸಂಯೋಜಿತ) ಕ್ರೀಡಾಕೂಟದ ರನ್ನರ್ಸ್ ಅಪ್ ಪ್ರಶಸ್ತಿಯನ್ನು ಪಡೆದುಕೊಂಡಿದೆ. ಹಾಗೂ ಮಾರ್ಚ್ ಪಾಸ್ಟ್‌ನಲ್ಲಿ ಪ್ರಥಮ ಸ್ಥಾನವನ್ನು ಗಳಿಸಿದೆ.
ವಿಶ್ವೇಶ್ವರಯ್ಯ ತಾಂತ್ರಿಕ ಮಹಾವಿದ್ಯಾಲಯದ ಪ್ರಾದೇಶಿಕ ಕೇಂದ್ರ, ಮೈಸೂರು, ಇಲ್ಲಿ 2024 ರ ಜೂನ್ 26 ರಿಂದ 29 ರವರೆಗೆ ನಡೆದ ಈ ಕ್ರೀಡಾಕೂಟದಲ್ಲಿ ಒಟ್ಟು 129 ಕಾಲೇಜುಗಳಿಂದ ಸುಮಾರು 1,584 ಕ್ರೀಡಾಪಟುಗಳು ಭಾಗವಹಿಸಿದ್ದರು.