Mangalore: ಲೋಕಾಯುಕ್ತ ಬಲೆಗೆ ಬಿದ್ದ ಪೊಲೀಸ್ ನಿರೀಕ್ಷಕ

Mangalore: ಲೋಕಾಯುಕ್ತ ಬಲೆಗೆ ಬಿದ್ದ ಪೊಲೀಸ್ ನಿರೀಕ್ಷಕ

ಮಂಗಳೂರು: ಲಂಚ ಸ್ವೀಕರಿಸುತ್ತಿದ್ದ ಮೀಸಲು ಪೊಲೀಸ್ ವಿಶೇಷ ಪಡೆಯ ಪೊಲೀಸ್ ನಿರೀಕ್ಷಕ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ಬುಧವಾರ ಮಂಗಳೂರಿನ ಹೊರವಲಯದ ಕೊಣಾಜೆಯಲ್ಲಿ ನಡೆದಿದೆ.

ಕರ್ನಾಟಕ ಪೊಲೀಸ್ ವಿಶೇಷ ಮೀಸಲು ಪಡೆ 7ನೇ ಬೆಟಾಲಿಯನ್ ಕೊಣಾಜೆ ಇಲ್ಲಿನ ಪೊಲೀಸ್ ನಿರೀಕ್ಷಕ ಮಹಮ್ಮದ್ ಆರೀಸ್ ಲೋಕಾಯುಕ್ತ ಬಲೆಗೆ ಬಿದ್ದಾತ. 

ಪಿರ್ಯಾದಿಯು ಕರ್ನಾಟಕ ಪೊಲೀಸ್ ವಿಶೇಷ ಮೀಸಲು ಪಡೆ 7ನೇ ಬೆಟಾಲಿಯನ್‌ನಲ್ಲಿ ಮೀಸಲು ಪೊಲೀಸ್ ಕಾನ್ಸ್‌ಸ್ಟೇಬಲ್ ಆಗಿದ್ದು, ಪೊಲೀಸ್ ಅತಿಥಿಗೃಹ  ನಿರ್ವಾಹಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ತಾನು ಕರ್ತವ್ಯ ನಿರ್ವಹಿಸಬೇಕಾದರೆ ನನಗೆ 20,000 ರೂ. ನೀಡಬೇಕು, ಅಲ್ಲದೆ ಪ್ರತಿ ತಿಂಗಳು 6,000 ರೂ.ನಂತೆ ಹಣ  ನೀಡಬೇಕೆಂದು ಫಿರ್ಯಾದಿದಾರರಿಗೆ ಮಹಮ್ಮದ್ ಆರೀಸ್ ಬೇಡಿಕೆ ಇರಿಸಿದ್ದರು. ಹೀಗಾಗಿ ಅಧಿಕಾರಿಗೆ ಪ್ರತಿ ತಿಂಗಳು 6,000 ರು.ವನ್ನು ಪಿರ್ಯಾದಿದಾರರು ಲಂಚವಾಗಿ  ನೀಡುತ್ತಾ ಬಂದಿದ್ದು, ಈ ವರೆಗೆ ಒಟ್ಟು 50,000 ರೂ. ಪಡೆದಿದ್ದರು.

ಪಿರ್ಯಾದಿದಾರರ ತಂದೆಯವರ ಅನಾರೋಗ್ಯದ ನಿಮಿತ್ತ 2024ರ ಏಪ್ರಿಲ್ ತಿಂಗಳಿನಿಂದ ಜೂನ್ ತಿಂಗಳವರೆಗಿನ ಮೂರು ತಿಂಗಳ 18,000 ರೂ. ಲಂಚವಾಗಿ  ಕೊಡಬೇಕಾದ ಹಣವನ್ನು ಮಹಮ್ಮದ್ ಆರೀಸ್‌ಗೆ ನೀಡಲು ಪಿರ್ಯಾದಿದಾರರಿಗೆ ಸಾಧ್ಯವಾಗಿರಲಿಲ್ಲ. ಇದೇ ಕಾರಣಕ್ಕೆ ಅಧಿಕಾರಿಯು ಪ್ರತಿ ದಿನ ಪಿರ್ಯಾದಿದಾರರಿಗೆ ಕರೆ ಮಾಡಿ, ನೀಡಲು ಬಾಕಿ ಇರುವುದನ್ನು ನೀಡು, ಇಲ್ಲವಾದರೆ ಕರ್ತವ್ಯ ಸ್ಥಳ ಬದಲಾಯಿಸುತ್ತೇನೆ ಎಂದು ಬೆದರಿಕೆ ಹಾಕುತ್ತಿದ್ದರು.

ಈ ಬಗ್ಗೆ ಪಿರ್ಯಾದಿ ಲೋಕಾಯುಕ್ತಕ್ಕೆ ದೂರು ನೀಡಿದ್ದರು. ಅದರಂತೆ ಬುಧವಾರ 18 ಸಾವಿರ ರೂ. ಲಂಚದ ಹಣ ಸ್ವೀಕರಿಸುತ್ತಿದ್ದಾಗಲೇ ಪೊಲೀಸ್ ನಿರೀಕ್ಷಕ ಮಹಮ್ಮದ್ ಆರೀಸ್ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದರು.

ಈ ಕಾರ್ಯಾಚರಣೆಯಲ್ಲಿ ಲೋಕಾಯುಕ್ತ ಪೊಲೀಸ್ ಅಧೀಕ್ಷಕ ಎಂ.ಎ ನಟರಾಜ್ ಮಾರ್ಗದರ್ಶನದಲ್ಲಿ ಎಸ್ಪಿ ಡಾ.ಗಾನ ಪಿ.ಕುಮಾರ್, ಚೆಲುವರಾಜು, ಪೊಲೀಸ್ ನಿರೀಕ್ಷಕರಾದ ಅಮಾನುಲ್ಲಾ, ಸುರೇಶ್ ಕುಮಾರ್, ಚಂದ್ರಶೇಖರ್ ಹಾಗೂ ಸಿಬ್ಬಂದಿ ಕಾರ್ಯಾಚರಣೆ ನಡೆಸಿದ್ದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article