Mangalore: ಉರ್ವಸ್ಟೋರ್ ಮಾರುಕಟ್ಟೆಯನ್ನು ಸುಸಜ್ಜಿತಗೊಳಿಸಲು ಮತ್ತು ಸಾರ್ವಜನಿಕ ಶೌಚಾಲಯ ನಿರ್ಮಾಣಕ್ಕೆ ಒತ್ತಾಯಿಸಿ ಮನವಿ

Mangalore: ಉರ್ವಸ್ಟೋರ್ ಮಾರುಕಟ್ಟೆಯನ್ನು ಸುಸಜ್ಜಿತಗೊಳಿಸಲು ಮತ್ತು ಸಾರ್ವಜನಿಕ ಶೌಚಾಲಯ ನಿರ್ಮಾಣಕ್ಕೆ ಒತ್ತಾಯಿಸಿ ಮನವಿ

ಮಂಗಳೂರು: ಮಂಗಳೂರು ನಗರ ವ್ಯಾಪ್ತಿಯ ಉರ್ವಸ್ಟೋರ್ ಮಾರುಕಟ್ಟೆ ಸಂಪೂರ್ಣ ಶಿಥಿಲಾವಸ್ಥೆಯಲ್ಲಿದ್ದು, ಈವರೆಗೂ ಈ ಮಾರುಕಟ್ಟೆಯನ್ನು ಅಭಿವೃದ್ಧಿಗೊಳಿಸುವಲ್ಲಿ ಮಂಗಳೂರು ಮಹಾನಗರ ಪಾಲಿಕೆಯು ಮುಂದಾಗದಿರುವ ನಡೆ ಈ ಭಾಗದ ಜನರಿಗೆ ನಿರಾಶೆಯನ್ನುಂಟು ಮಾಡಿದೆ. 

ಈ ಭಾಗದ ಜನರ ಬಹು ಮುಖ್ಯದ ಬೇಡಿಕೆಯಾಗಿರುವ ಉರ್ವಸ್ಟೋರ್ ಮಾರುಕಟ್ಟೆ ಸುಸಜ್ಜಿತಗೊಳಿಸಲು ಈಗಾಗಲೇ ಹಲವಾರು ಬಾರಿ ಮನವಿಯನ್ನು ಸಲ್ಲಿಸಿದ್ದು ಮಾತ್ರವಲ್ಲದೆ ಡಿವೈಎಫ್‌ಐ ನೇತೃತ್ವದಲ್ಲಿ ಹೋರಾಟಗಳು ಕೂಡ ನಡೆದಿರುತ್ತದೆ. ಆದರೆ ಪಾಲಿಕೆ ಆಡಳಿತ ಮಾತ್ರ ಈ ಮಾರುಕಟ್ಟೆ ಸುಸಜ್ಜಿತಗೊಳಿಸುವ ಯಾವ ತೀರ್ಮಾನಕ್ಕೂ ಬರದೆ ಕನಿಷ್ಟ ಶಿಥಿಲಾವಸ್ಥೆಯಲ್ಲಿರುವ ಮಾರುಕಟ್ಟೆಯನ್ನು ಮೂಲಭೂತ ಸೌಕರ್ಯಗಳ ಸಹಿತ ಸರಿಪಡಿಸುವ ಕೆಲಸಕ್ಕೂ ಮುಂದಾಗಿಲ್ಲ. 

ನಗರದ ಹೃದಯ ಭಾಗದಲ್ಲೇ ಇರುವ ಈ ಮಾರುಕಟ್ಟೆಯನ್ನು ಹೊಂದಿಕೊಂಡು ಸಾವಿರಾರು ಗ್ರಾಹಕರು ಹಲವು ರೀತಿಯ ಸಮಸ್ಯೆಗಳನ್ನು ಅನುಭವಿಸುತ್ತಿದ್ದಾರೆ. ಸರಿಯಾದ ಛಾವಣಿಗಳಿಲ್ಲದ ಈ ಮಾರುಕಟ್ಟೆಯಲ್ಲಿ ವ್ಯಾಪಾರ ವಹಿವಾಟು ನಡೆಸುವ ಸಣ್ಣಪುಟ್ಟ ವ್ಯಾಪಾರಿಗಳು ಬಿಸಿಲು ಮಳೆಗೆ ಸರಿಯಾದ ರಕ್ಷಣೆಯಿಲ್ಲದೆ ಸಂಕಷ್ಟಕ್ಕೆ ಒಳಗಾಗಿದ್ದಾರೆ. ಮಾತ್ರವಲ್ಲದೆ ಈ ಮಾರುಕಟ್ಟೆಯಲ್ಲಿ ಸರಿಯಾದ ಶೌಚಾಲಯದ ವ್ಯವಸ್ಥೆಯೂ ಇಲ್ಲದೆ ಇಲ್ಲಿನ ವ್ಯಾಪಾರಿಗಳು ಮತ್ತು ಗ್ರಾಹಕರು ಬಹಳಷ್ಟು ಸಮಸ್ಯೆಗಳನ್ನು ಅನುಭವಿಸುವ ಮೂಲಕ ಮುಜುಗರಕ್ಕೆ ಒಳಗಾಗುತ್ತಿದ್ದಾರೆ.

ಈ ಎಲ್ಲಾ ಹಿನ್ನಲೆಯಲ್ಲಿ ಮಂಗಳೂರು ಮಹಾನಗರ ಪಾಲಿಕೆ ಆಡಳಿತ ಕೂಡಲೇ ಉರ್ವಸ್ಟೋರ್ ಮಾರುಕಟ್ಟೆಯನ್ನು ಮೇಲ್ದರ್ಜೆಗೇರಿಸಿ ಸುಸಜ್ಜಿತಗೊಳಿಸಬೇಕು ಹಾಗೂ ಸಾರ್ವಜನಿಕ ಶೌಚಾಲಯಗಳನ್ನು ನಿರ್ಮಿಸಲು ಮುಂದಾಗಬೇಕೆಂದು ಡಿವೈಎಫ್‌ಐ ಒತ್ತಾಯಿಸಿದೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article