
Mangalore: ವಿದ್ಯುತ್ ಸುರಕ್ಷತಾ ಜಾಗೃತಿ
Monday, July 1, 2024
ಮಂಗಳೂರು: ವಿದ್ಯುತ್ ಸುರಕ್ಷತೆ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸುವ ನಿಟ್ಟಿನಲ್ಲಿ ಮೆಸ್ಕಾಂ ಕಾವೂರು ಮತ್ತು ಕೈಕಂಬ ಉಪವಿಭಾಗಗಳ ವತಿಯಿಂದ ಜಾಗೃತಿ ಜಾಥಾ ಹಾಗೂ ಸಾರ್ವಜನಿಕ ಪ್ರದೇಶಗಳಲ್ಲಿ ವಿದ್ಯುತ್ ಸುರಕ್ಷತೆಯ ಬಗ್ಗೆ ಮಾಹಿತಿ ಭಿತ್ತಿಪತ್ರಗಳನ್ನು ಅಂಟಿಸುವ ಕಾರ್ಯಕ್ರಮ ಸೋಮವಾರ ನಡೆಯಿತು.
ಕಾವೂರು ಕಾರ್ಯನಿರ್ವಾಹಕ ಇಂಜಿನಿಯರ್ ಸಂತೋಷ್ ನಾಯಕ್ ಹಾಗೂ ಕೈಕಂಬ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಸುನಿಲ್ ಮೊಂತೊರೋ ಅವರ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಾಗೃತಿ ಜಾಥಾವು ಪ್ರಮುಖ ರಸ್ತೆಗಳಲ್ಲಿ ಮುಂಜಾಗ್ರತಾ ಕ್ರಮಗಳನ್ನು, ಧ್ವನಿವರ್ಧಕದ ಮೂಲಕ ಬಿತ್ತರಿಸುತ್ತಾ, ಬಸ್ ನಿಲ್ದಾಣಗಳು ಸೇರಿದಂತೆ ಸಾರ್ವಜನಿಕ ಪ್ರದೇಶಗಳಲ್ಲಿ ಭಿತ್ತಿಪತ್ರಗಳನ್ನು ಅಂಟಿಸಲಾಯಿತು.