
Mangalore: ಕಟ್ಟಡ ಕುಸಿತ ಘಟನೆ-ಮೂವರ ಮೇಲೆ ಪ್ರಕರಣ ದಾಖಲು: ಓರ್ವನ ಬಂಧನ
Thursday, July 4, 2024
ಮಂಗಳೂರು: ಮಂಗಳೂರು ನಗರದ ಬಲ್ಮಠದಲ್ಲಿ ನಿರ್ಮಾಣ ಹಂತದಲ್ಲಿದ್ದ ಕಟ್ಟಡವು ನಿನ್ನೆ ಕುಸಿದು ಬಿದ್ದಿದ್ದು, ಇದರಲ್ಲಿ ಓರ್ವ ಮೃತಪಟ್ಟಿದ್ದಾನೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕಟ್ಟಡ ನಿರ್ಮಾಣದ ಜವಾಬ್ದಾರಿಯನ್ನು ವಹಿಸಿಕೊಂಡಿದ್ದ ಮೂವರ ವಿರುದ್ಧ ಕದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ತಿಳಿಸಿದರು.
ಅವರು ಇಂದು ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿ, 105, 125 A, 125 B ಹಾಗೂ ಬಿಎನ್‌ಎಸ್ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.
ಈಗಾಗಲೇ ಮೂವರಲ್ಲಿ ಗುತ್ತಿಗೆದಾರ ವೇಣುಗೋಪಾಲ್ ಎಂಬಾತನನ್ನು ಬಂಧಿಸಿದ್ದು, ಇನ್ನಿಬ್ಬರನ್ನು ಶೀಘ್ರವಾಗಿ ಬಂಧಿಸಲಾಗುವುದು ಎಂದು ಕಮಿಷನರ್ ತಿಳಿಸಿದರು.