
Mangalore: ಸೇತುವೆ ಶಿಥಿಲ-ಘನವಾಹನ ಸಂಚಾರ ನಿಷೇಧ: ಮುಲ್ಲೈ ಮುಗಿಲನ್ ಎಂ.ಪಿ.
Monday, July 1, 2024
ಮಂಗಳೂರು: ಬೆಳ್ತಂಗಡಿ ತಾಲೂಕಿನ ಕಲ್ಲಂಜ ಗ್ರಾಮ ನಿಡಿಗಲ್ ಮೂಲಕ ನಡ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗುರಿಪಳ್ಳಕ್ಕೆ ಸಂಪರ್ಕ ಕಲ್ಪಿಸುವ ಉಜಿರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಉಜಿರೆ-ಇಂದಬೆಟ್ಟು ಜಿಲ್ಲಾ ಮುಖ್ಯ ರಸ್ತೆಯ 1.10 ಕಿ ಮೀ ರಲ್ಲಿರುವ ಅಂಬಡಬೆಟ್ಟು ಸೇತುವೆಯು ಶಿಥಿಲಾವಸ್ಥೆಯಲ್ಲಿ ಇರುವುದರಿಂದ ವಾಹನ ಸಂಚಾರಕ್ಕೆ ಅಪಾಯಕಾರಿಯಾಗಿದೆ. ಈ ಹಿನ್ನೆಲೆಯಲ್ಲಿ ಮುಂದಿನ ಆದೇಶದವರೆಗೆ ಈ ಸೇತುವೆಯಲ್ಲಿ ಘನವಾಹನ ಸಂಚಾರವನ್ನು ನಿಬರ್ಂಧಿಸಿ, ಸಂಚಾರ ಮಾರ್ಗ ಬದಲಾಯಿಸುವಂತೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಆದೇಶಿಸಿದ್ದಾರೆ.
ಉಜಿರೆ-ಇಂದಬೆಟ್ಟು ಜಿಲ್ಲಾ ಮುಖ್ಯ ರಸ್ತೆಯಲ್ಲಿ ಸಂಚರಿಸುವ ವಾಹನಗಳು ಬದಲಿ ರಸ್ತೆಯನ್ನು ಬಳಸಿಕೊಂಡು ಸಂಚರಿಸಬಹುದಾಗಿದೆ. ಉಜಿರೆ ಜನಾರ್ದನ ಸ್ವಾಮಿ ದೇವಸ್ಥಾನದ ದ್ವಾರದಿಂದ, ಸೂರ್ಯ ದೇವಸ್ಥಾನ ಮಾರ್ಗವಾಗಿ, ಕೇಳ್ತಾಜೆ ಮುಖಾಂತರ ಸಂಚರಿಸಬೇಕು. ಬೆಳ್ತಂಗಡಿ-ಕಿಲ್ಲೂರು-ಕಾಜೂರು ರಸ್ತೆಯ ಇಂದಬೆಟ್ಟು ಗ್ರಾಮದಿಂದ ನೇತ್ರಾವತಿ ಎಸ್.ಟಿ. ಕಾಲೋನಿ ಮಾರ್ಗವಾಗಿ ಬೆಳ್ಳೂರು ಕ್ರಾಸ್ ರಸ್ತೆಯಾಗಿ, ರಾಜ್ಯ ಹೆದ್ದಾರಿ-276 ರಸ್ತೆಯಾದ ಸುಳ್ಯ, ಪೈಚಾರು, ಬೆಳ್ಳಾರೆ, ಸವಣೂರು, ಕುದ್ಮಾರು, ಅಲಂಕಾರು, ಸುರುಳಿ, ಮಾದೇರಿ, ಮಟ್ರಮೇ, ಧರ್ಮಸ್ಥಳ, ಗುಂಡಾಜೆ, ದಿಡುಪೆ ರಸ್ತೆಯನ್ನು ಸಂಪರ್ಕಿಸುವಂತೆ ಆದೇಶಿಸಿದ್ದಾರೆ.