ವಿಮಾನ ಸಂಚಾರ ವ್ಯತ್ಯಯ

ವಿಮಾನ ಸಂಚಾರ ವ್ಯತ್ಯಯ

ಮಂಗಳೂರು: ಮೈಕ್ರೋಸಾಫ್ಟ್ ಕ್ಲೌಡ್ ಸರ್ವೀಸ್‌ನಲ್ಲಿ ಸಮಸ್ಯೆಯಾದ ಹಿನ್ನೆಲೆಯಲ್ಲಿ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲೂ ಶುಕ್ರವಾರ ವಿಮಾನ ಸಂಚಾರದಲ್ಲಿ ವ್ಯತ್ಯಯವಾಗಿದೆ.

ಮೂರು ಅಂತಾರಾಷ್ಟ್ರೀಯ ವಿಮಾನಗಳು ಹಾರಾಟ ರದ್ದುಗೊಳಿಸಿದ್ದರೆ, ದೇಶೀಯ ವಿಮಾನ ಹಾರಾಟದಲ್ಲಿ ವ್ಯತ್ಯಯ ಉಂಟಾಗಿದೆ. ವಿಮಾನ ನಿಲ್ದಾಣದಲ್ಲಿ ಚೆಕ್ ಇನ್‌ಗೆ ಮ್ಯಾನುವಲ್ ವ್ಯವಸ್ಥೆ ಮಾಡಲಾಗಿತ್ತು. ಈ ಹಿನ್ನೆಲೆಯಲ್ಲಿ ನಿಗದಿತ ಸಮಯಕ್ಕಿಂತ ಮೊದಲೇ ವಿಮಾನ ನಿಲ್ದಾಣಕ್ಕೆ ಬರುವಂತೆ ಪ್ರಯಾಣಿಕರಿಗೆ ವಿಮಾನಯಾನ ಸಂಸ್ಥೆಗಳ ಅಧಿಕಾರಿಗಳು ಸೂಚನೆ ನೀಡಿದ್ದರು. ಈ ಮೂಲಕ ವಿಮಾನ ಸೇವೆಯಲ್ಲಿ ವ್ಯತ್ಯಯವಾಗದಂತೆ ನೋಡಿಕೊಳ್ಳಲು ಕ್ರಮ ಕೈಗೊಂಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್ ಮೂಲಕ ವಿಮಾನ ನಿಲ್ದಾಣದ ಅಧಿಕಾರಿಗಳು ಮನವಿ ಮಾಡಿದ್ದಾರೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article