
Mangalore: ವಿವಿಧ ಕ್ಷೇತ್ರದ ಗಣ್ಯರೊಂದಿಗೆ ಪರಾಂಡೆ ಸಂವಾದ
Monday, July 8, 2024
ಮಂಗಳೂರು: ವಿಶ್ವ ಹಿಂದೂ ಪರಿಷತ್ತಿನ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮಿಲಿಂದ್ ಪರಾಂಡೆ ಅವರು ಭಾನುವಾರ ಮಂಗಳೂರಿಗೆ ಆಗಮಿಸಿದ್ದು ವಿಶ್ವ ಹಿಂದೂ ಪರಿಷತ್ತಿನ ವಿಭಾಗ ಪದಾಧಿಕಾರಿಗಳ ಅಭ್ಯಾಸ ವರ್ಗದಲ್ಲಿ ಪಾಲ್ಗೊಂಡರು. ಬಳಿಕ ಅವರು ಶಕ್ತಿ ರೆಸಿಡೆನ್ಶಿಯಲ್ ಶಾಲೆಯಲ್ಲಿ ಮಂಗಳೂರಿನ ವಿವಿಧ ವಿವಿಧ ಕ್ಷೇತ್ರದ ಗಣ್ಯರೊಂದಿಗೆ ಸಂವಾದ ಸಭೆಯಲ್ಲಿ ಪಾಲ್ಗೊಂಡರು.
ವಿಹಿಂಪ ಜಿಲ್ಲಾಧ್ಯಕ್ಷ ಎಚ್.ಕೆ. ಪುರುಷೋತ್ತಮ, ಶಕ್ತಿ ಸಮೂಹ ಸಂಸ್ಥೆಯ ಅಧ್ಯಕ್ಷ ಡಾ. ಕೆ.ಸಿ. ನಾಯ್ಕ್, ಶಾರದಾ ವಿದ್ಯಾ ಸಂಸ್ಥೆಯ ಅಧ್ಯಕ್ಷ ಪ್ರೊ. ಎಂ.ಬಿ. ಪುರಾಣಿಕ್, ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಮಂಗಳೂರು ಮಹಾನಗರ ಸಂಘಚಾಲಕ್ ಡಾ. ಸತೀಶ್ ರಾವ್ ಮತ್ತಿತರರು ಉಪಸ್ಥಿತರಿದ್ದರು.