Mangalore: ಬಿಜೆಪಿ ನಾಯಕರ ಬಂಧನ ಖಂಡಿಸಿ ನಗರದಲ್ಲಿ ಪ್ರತಿಭಟನೆ

Mangalore: ಬಿಜೆಪಿ ನಾಯಕರ ಬಂಧನ ಖಂಡಿಸಿ ನಗರದಲ್ಲಿ ಪ್ರತಿಭಟನೆ


ಮಂಗಳೂರು: ನಾಲ್ಕು ಸಾವಿರ ಕೋಟಿಯ ಮೂಡ ಹಗರಣ ಖಂಡಿಸಿ ಮೈಸೂರಿನಲ್ಲಿ ಆಯೋಜಿಸಿದ್ದ ಪ್ರತಿಭಟನಾ ಸಭೆಗೆ ತೆರಳುತ್ತಿದ್ದ ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ.ವೈ ವಿಜಯೇಂದ್ರ, ವಿಪಕ್ಷ ನಾಯಕ ಆರ್. ಅಶೋಕ್ ಸಹಿತ ಹಲವು ನಾಯಕರನ್ನು ಬೆಂಗಳೂರಿನಲ್ಲಿಯೇ ಬಂಧಿಸಿದ ಕಾಂಗ್ರೆಸ್ ಸರ್ಕಾರದ ವಿರುದ್ಧ ದ.ಕ ಜಿಲ್ಲಾ ಬಿಜೆಪಿ ಕಚೇರಿ ಬಳಿ ಇಂದು ಪ್ರತಿಭಟನೆ ನಡೆಯಿತು. 

ಶಾಸಕ ವೇದವ್ಯಾಸ್ ಕಾಮತ್ ಮಾತನಾಡಿ, ರಣಹೇಡಿ ಭ್ರಷ್ಟ ಕಾಂಗ್ರೆಸ್ ಸರ್ಕಾರ ವಿಪಕ್ಷಗಳ ಪ್ರತಿಭಟನಾ ಸ್ವಾತಂತ್ರ್ಯವನ್ನು ಹತ್ತಿಕ್ಕಿದೆ.  ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ಸರ್ವಾಧಿಕಾರ ಧೋರಣೆಯ ಮೂಲಕ ರಾಜ್ಯದಲ್ಲಿ ಅಘೋಷಿತ ತುರ್ತು ಪರಿಸ್ಥಿತಿಯ ವಾತಾವರಣ ನಿರ್ಮಾಣವಾಗಿದೆ. ಸಿದ್ದರಾಮಯ್ಯನವರು ಬಿಜೆಪಿಯ ಪ್ರತಿಭಟನೆಯನ್ನು ಹತ್ತಿಕ್ಕಬಹುದು ಆದರೆ ಹಗರಣದದಿಂದ ತಪ್ಪಿಸಿಕೊಳ್ಳಲು ಸಾಧ್ಯವೇ ಇಲ್ಲ. ಕೈಯಲ್ಲಿ ಸಂವಿಧಾನದ ಪ್ರತಿಯನ್ನು ಹಿಡಿದುಕೊಂಡು ಬಾಯಲ್ಲಿ ಪ್ರಜಾಪ್ರಭುತ್ವ, ಸಂವಿಧಾನ ರಕ್ಷಣೆ, ಅಭಿವ್ಯಕ್ತಿ ಸ್ವಾತಂತ್ರ್ಯವೆನ್ನುತ್ತಾ ತಿರುಗಾಡುವ ರಾಹುಲ್ ಗಾಂಧಿ ಈಗೆಲ್ಲಿದ್ದಾರೆ? ಸಿದ್ದರಾಮಯ್ಯನವರಿಗೆ ತಪ್ಪು ಮಾಡಿದ್ದರಿಂದಲೇ ಭಯ ಕಾಡುತ್ತಿದೆ. ಈ ಕೂಡಲೇ ರಾಜೀನಾಮೆ ಕೊಟ್ಟು ಮನೆಗೆ ಹೋಗಬೇಕು ಎಂದು ಆಗ್ರಹಿಸಿದರು.

ದ. ಕ. ಜಿಲ್ಲಾ ಬಿಜೆಪಿ ಅಧ್ಯಕ್ಷ ಸತೀಶ್ ಕುಂಪಲ ಮಾತನಾಡಿ, ಸಂವಿಧಾನದ ರಕ್ಷಣೆ ಬಗ್ಗೆ ಮಾತನಾಡುತ್ತಿರುವ ಕಾಂಗ್ರೆಸಿಗರು ರಾಜ್ಯದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ಹೇರಿದಂತಿದೆ. ಹೋರಾಟ ಮಾಡುವ ರಾಜ್ಯ ಬಿಜೆಪಿ ಶಾಸಕರ ಮೇಲೆ, ನಾಯಕರ, ಕಾರ್ಯಕರ್ತರ ಮೇಲೆ ಸುಳ್ಳು ಮೊಕದ್ದಮೆ ಹೂಡುವುದು, ಬಂಧಿಸುವುದರ ಮೂಲಕ ಸಂವಿಧಾನ ಬದ್ಧವಾದ ಪ್ರತಿಭಟನೆಯ ಹಕ್ಕನ್ನು ಹೊಸಕಿ ಹಾಕುವ ಪ್ರಯತ್ನಕ್ಕೆ ಸಿದ್ದರಾಮಯ್ಯ ಸರಕಾರದ ನೀತಿಯ ವಿರುದ್ಧ ಬಿಜೆಪಿ ನಿರಂತರ ಹೋರಾಟ ನಡೆಸಲಿದೆ ಎಂದರು. 

ಶಾಸಕ ಹರೀಶ್ ಪೂಂಜ, ಮಾಜಿ ಶಾಸಕ ಕ್ಯಾ.ಗಣೇಶ್ ಕಾರ್ಣಿಕ್, ಮಾಜಿ ಮೇಯರ್ ಪ್ರೇಮಾನಂದ ಶೆಟ್ಟಿ, ನಂದನ್ ಮಲ್ಯ ಮೊದಲಾದವರಿದ್ದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article