
Mangalore: ಭರತ್ ಶೆಟ್ಟಿ ಗಂಡಸಾಗಿದ್ದರೆ ಕಾಂಗ್ರೆಸ್‌ನ ಸಾಮಾನ್ಯ ಕಾರ್ಯಕರ್ತನ ಮೈ ಮುಟ್ಟಿನೋಡಲಿ: ರಮಾನಾಥ ರೈ ಸವಾಲು
ಮಂಗಳೂರು: ಸಂಸತ್ತಿನಲ್ಲಿ ವಿಪಕ್ಷ ನಾಯಕ ರಾಹುಲ್ ಗಾಂಧಿ ನೀಡಿರುವ ಹೇಳಿಕೆ ಬಗ್ಗೆ ಪ್ರಚೋದನಾಕಾರಿ ಹಾಗೂ ಅವಹೇಳನಕಾರಿಯಾಗಿ ಮಾತನಾಡಿರುವ ಶಾಸಕ ಡಾ. ಭರತ್ ಶೆಟ್ಟಿ ಗಂಡಸಾಗಿದ್ದರೆ ಸಾಮಾನ್ಯ ಕಾರ್ಯಕರ್ತನ ಮೈ ಮುಟ್ಟಿನೋಡಲಿ ಎಂದು ಮಾಜಿ ಸಚಿವ ರಮಾನಾಥ ರೈ ಸವಾಲು ಹಾಕಿದರು.
ದ.ಕ. ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಖಂಡನಾರ್ಹ ಹೇಳಿಕೆ ನೀಡಿರುವ ಶಾಸಕ ಭರತ್ ಶೆಟ್ಟಿವಿರುದ್ಧ ಸರಕಾರ ಸುಮೊಟೋ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿದರು.
ಸಂಸತ್ತಿನ ವಿಪಕ್ಷ ನಾಯಕರಾಗಿ ಅಧಿಕೃತವಾಗಿ ಆಯ್ಕೆಯಾದ ರಾಹುಲ? ದೇಶಕ್ಕೆ ಪ್ರಾಣ ಕೊಟ್ಟನೆಹರೂ, ಇಂದಿರಾಗಾಂಧಿಯವರ ಕುಡಿ. ರಾಹುಲ್ ಹೇಳಿಕೆಯನ್ನು ಕೆಟ್ಟದಾಗಿ ಪ್ರತಿಬಿಂಬಿಸುವ ಕೆಲಸ ಬಿಜೆಪಿ ಮಾಡುತ್ತಿದೆ. ಸತಾನದ ಧರ್ಮದ ಜಗದ್ಗುರು ಎನಿಸಿಕೊಂಡಿರುವ ಜ್ಯೋತಿರ್ಮಠದ ೪೬ನೇ ಶಂಕರಾಚಾರ್ಯ ಸ್ವಾಮೀಜಿಯವರೇ ರಾಹುಲ್ ಗಾಂಧಿ ಹೇಳಿಕೆಯನ್ನ ತಾನು ಪೂರ್ತಿ ಗಮನಿಸಿದ್ದು ಅದರಲ್ಲಿ ಹಿಂದೂ ಸಮಾಜದಲ್ಲಿ ಹಿಂಸೆಗೆ ಅವಕಾಶವಿಲ್ಲ ಅಂದಿದ್ದರಾಯೆ ವಿನಹ ಹಿಂದೂ ಸಮಾಜದ ವಿರುದ್ಧ ಮಾತನಾಡಿಲ್ಲ ಎಂದಿದ್ದಾರೆ. ಮಾತ್ರವಲ್ಲದೆ, ರಾಹುಲ್ ಗಾಂಧಿ ಮಾತನ್ನು ಅಪಪ್ರಚಾರ ಮಾಡುವವರ ಮೇಲೆ ಶಿಕ್ಷೆ ಆಗಬೇಕು ಎಂದು ಹೇಳಿದ್ದಾರೆ ಎಂದರು.
ಡಾ. ಭರತ್ ಶಾಸಕನಾಗಲು ನಾಲಾಯಕ್, ಯೋಗ್ಯತೆ ಇಲ್ಲದ ಮನುಷ್ಯ. ಬಿಜೆಪಿ ವಚನ ಭ್ರಷ್ಟಎಂದು ಕುಮಾರ ಸ್ವಾಮಿ ಅಂದು ಹೇಳಿದಾಗ ಭರತ್ ಶೆಟ್ಟಿಜನತಾ ದಳ ಪಕ್ಷದಲ್ಲಿದ್ದರು. ಅಮರನಾಥ್ ಶೆಟ್ಟಿ ಅವರ ಕೃಪಾ ಕಟಾಕ್ಷದಿಂದ ರಾಜಕೀಯದಲ್ಲಿ ಮೇಲೆ ಬಂದು ಅವರಿಗೆ ಕೈ ಕೊಟ್ಟಿದ್ದಾರು ಭರತ್ ಶೆಟ್ಟಿ, ರಾಹುಲ್ ಕಪಾಲಕ್ಕೆ ಹೊಡೆಯುವ ಹೇಳಿಕೆ ಮೂಲಕ ಬಿಜೆಪಿಯ ಹಿಂಸೆಯನ್ನು ಪರೋಕ್ಷವಾಗಿ ಒಪ್ಪಿಕೊಂಡಂತೆ. ಈ ಹಿಂಸೆಯ ಬಿಜೆಪಿಯ ಪ್ರವೃತ್ತಿಯನ್ನೆ ರಾಹುಲ್ ವಿರೋಧಿಸಿ ಹೇಳಿಕೆ ನೀಡಿದ್ದು ಎಂದು ರಮಾನಾಥ ರೈ ಹೇಳಿದರು.
ಭರತ್ ಶೆಟ್ಟಿಗೆ ತಾಕತ್ತಿದ್ದರೆ ಸಾಮಾನ್ಯ ಕಾರ್ಯಕರ್ತನ ಮೇಲೆ ಕೈಮಾಡಿ ನೋಡಲಿ ಆಮೇಲೆ ನೋಡೋಣ ಏನಾಗಲಿದೆ ಎಂದು ಸವಾಲನ್ನು ಪುನರುಚ್ಚರಿಸಿದ ಮಾಜಿ ಸಚಿವ ರೈ, ಬೆಳ್ತಂಗಡಿಯಲ್ಲಿ ಶಾಸಕ ಅಧಿಕಾರಿ ಮೇಲು ಕೈ ಮಾಡಲು ಹೋಗಿದ್ದಾರೆ. ಬಿಜೆಪಿ ಅಧಿಕಾರ ಕಳೆದುಕೊಂಡ ನೀರಿನಿಂದ ತೆಗೆದ ಮೀನಿನಂತೆ ಆಗಿದ್ದಾರೆ. ಹಿಂಸೆಗೆ ಪ್ರಚೋದನೆ ನೀಡುವ ಕೆಲಸ ಬಿಜೆಪಿಯವರು ಮಾಡುತ್ತಿದ್ದಾರೆ. ಸಮುದಾಯ ಮಧ್ಯ ವಿಭಜನೆ ಮಾಡಿ ಮತ ಗಳಿಸುವ ಯತ್ನ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.
ರಾಹುಲ್ ಅವರನ್ನು ಹುಚ್ಚ ಎಂದು ಹೇಳಿದ್ದು, ಆ ಹುಚ್ಚ ಯಾರು ಎಂದು ಅವರ ನಾಯಕರ ಕಟೌಚ್‌ನಲ್ಲಿ ಅವರ ವೇಷ ಭೂಷಣ ನೋಡಿದಾಗ ತಿಳಿಯುತ್ತೆ. ನಮ್ಮನ್ನು ಕೂಡಾ ಹಿಂದೂವಿಗೆ ಹುಟ್ಟಿದವರು ಅಲ್ಲ, ನಮ್ಮ ತಾಯಿ ಬಗ್ಗೆಯೂ ಕೆಟ್ಟದಾಗಿ ಆರೋಪ ಮಾಡುವ ಬಿಜೆಪಿಗರು ನಮ್ಮ ಹುಟ್ಟನ್ನು ಪ್ರಶ್ನೆ ಮಾಡುತ್ತಾರೆ. ಇದು ಜನರನ್ನು ವಿಭಜಿಸಿ ಮತ ಗಳಿಸುವ ಕೀಳು ಮಟ್ಟದ ರಾಜಕೀಯ ಎಂದವರು ಹೇಳಿದರು.
ರಾಜ್ಯದಲ್ಲಿ ಡೆಂಗಿ ಹಾವಳಿ ಇದೆ. ಸರಕಾರ ಅದಕ್ಕಾಗಿ ಸೂಕ್ತ ಕ್ರಮ ಕೈಗೊಳ್ಳುತ್ತಿದೆ. ಈ ಬಗ್ಗೆ ಬಿಜೆಪಿ ಸುಮ್ಮನೆ ವಿರೋಧ ವ್ಯಕ್ತಪಡಿಸುವ ಅಗತ್ಯವಿಲ್ಲ. ಕೊರೊನಾ ಸಂಧರ್ಭ ಅಂದಿನ ಆರೋಗ್ಯ ಸಚಿವ ಡಾ. ಸುಧಾಕರ್ ಎಷ್ಟುಕೋಟಿ ಕೋಟಿ ರೂ. ಲೂಟಿ ಹೊಡೆದಿದ್ದಾರೆ ಎಂದು ಎಲ್ಲರಿಗೂ ಗೊತ್ತಿದೆ. ಬೆಲೆ ಏರಿಕೆ ಬಗ್ಗೆ ಮಾತನಾಡುವ ಬಿಜೆಪಿಗರಿಗೆ ದಿನ ಬಳಕೆ ವಸ್ತುಗಳ ಬೆಲೆ ಏರಿಕೆ ಆಗಿದ್ದು ಈಗ ಗೊತ್ತಾಗಿದ್ದೇ ಎಂದು ರಮಾನಾಥ ರೈ ಪ್ರಶ್ನಿಸಿದರು.
ಶಶಿಧರ್ ಹೆಗ್ಡೆ, ಶುಭೋದಯ ಆಳ್ವ, ನವೀನ್ ಡಿಸೋಜ, ಎಂ.ಜಿ. ಹೆಗಡೆ. ಅಶ್ರಫ್, ಪ್ರಕಾಶ್ ಸಾಲಿಯಾನ್, ಅಪ್ಪಿ, ರಮಾನಂದ ಪೂಜಾರಿ, ನೀರಜ್ ಪಾಲ್, ಚಿತ್ತರಂಜನ್ ಶೆಟ್ಟಿ, ಸಲೀಂ, ಸುರೇಂದ್ರ ಕಾಂಬ್ಳಿ, ಇಮ್ರಾನ್, ಸವಾದ್ ಉಪಸ್ಥಿತರಿದ್ದರು.