ಬಜೆಟ್‌ನಲ್ಲಿ ಕರ್ನಾಟಕಕ್ಕೆ ಅನ್ಯಾಯ: ಮಂಜುನಾಥ ಭಂಡಾರಿ
Tuesday, July 23, 2024
ಮಂಗಳೂರು: ಬಜೆಟ್‌ನಲ್ಲಿ ಕರ್ನಾಟಕಕ್ಕೆ ಅನ್ಯಾಯವಾಗಿದೆ. ಮೇಕೆದಾಟು ಯೋಜನೆಗೆ ಅನುಮತಿ ಇಲ್ಲ, ಭದ್ರಾ ಮೇಲ್ದಂಡೆ ಯೋಜನೆಗೆ ಅನುದಾನವಿಲ್ಲ. ಒಟ್ಟಿನಲ್ಲಿ ರಾಜ್ಯಕ್ಕೆ ಈ ಬಜೆಟ್ ನಲ್ಲಿ ಕೇಂದ್ರ ಸರ್ಕಾರ ಕರ್ನಾಟಕ್ಕೆ ಚೊಂಬು ನೀಡಿದೆ. ಬಜೆಟ್‌ನಲ್ಲಿ ರೈತರ ಬೇಡಿಕೆಗಳಿಗೆ ಸೂಕ್ತ ಸ್ಪಂದನೆ ಇಲ್ಲ. ದೇಶದ ಮಹಿಳೆಯರು, ರೈತರು ಹಾಗೂ ಯುವಜನತೆಯ ಭವಿಷ್ಯದ ಮೇಲೆ ನೇರವಾಗಿ ಸಕಾರಾತ್ಮಕ ಪರಿಣಾಮ ಬೀರುವ ಯಾವುದೇ ಗುಣಾತ್ಮಕ ಸಂಗತಿಗಳನ್ನು ಈ ಬಜೆಟ್ ಹೊಂದಿಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ವಿಧಾನಸಭಾ ಸದಸ್ಯ ಮಂಜುನಾಥ ಭಂಡಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.