ಮಂಗಳೂರು: ಮಂಗಳೂರು ರೈಲ್ವೇ ವಿಷಯಗಳ ಕುರಿತಂತೆ ಪರಿಶೀಲನೆ, ಜನಪ್ರತಿನಿಧಿಗಳು, ಅಧಿಕಾರಿಗಳ ಸಭೆಗಾಗಿ ಇಂದು ಮಂಗಳೂರಿಗೆ ಆಗಮಿಸಿದ್ದ ಕೇಂದ್ರದ ಜಲಶಕ್ತಿ ಮತ್ತು ರೈಲ್ವೇ ಇಲಾಖೆಯ ರಾಜ್ಯ ಸಚಿವ ವಿ. ಸೋಮಣ್ಣಗೆ ಕರಾವಳಿ ಪ್ರದೇಶಕ್ಕೆ ಪ್ರತ್ಯೇಕ ರೈಲ್ವೆ ವಿಭಾಗ ರಚಿಸುವಂತೆ ವಿಧಾನ ಪರಿಷತ್ ಸದಸ್ಯ ಡಾ. ಮಂಜುನಾಥ ಭಂಡಾರಿ ಮನವಿ ನೀಡಿ ವಿನಂತಿಸಿದರು.