ಸಂತ ಜೋಸೆಫ್ ಇಂಜಿನಿಯರಿಂಗ್ ಕಾಲೇಜಿಗೆ ಚೆಸ್ ಚಾಂಪಿಯನ್‌ಶಿಪ್‌ನಲ್ಲಿ ಟ್ರೋಫಿ
Monday, July 22, 2024
ಮಂಗಳೂರು: ವಿಟಿಯು ಬೆಂಗಳೂರು ಉಳಿದ ವಿಭಾಗದ ಚೆಸ್ ಚಾಂಪಿಯನ್‌ಶಿಪ್‌ನಲ್ಲಿ ಸಂತ ಜೋಸೆಫ್ ಇಂಜಿನಿಯರಿಂಗ್ ಕಾಲೇಜಿನ ಪುರುಷರ ಚೆಸ್ ತಂಡ ವಿನ್ನರ್ಸ್ ಟ್ರೋಫಿ ಮತ್ತು ಮಹಿಳಾ ಚೆಸ್ ತಂಡ ರನ್ನರ್ ಅಪ್ ಟ್ರೋಫಿಯನ್ನು ಪಡೆದುಕೊಂಡಿತು.
ಚೆಸ್ ಪಂದ್ಯಾಟವು ಜು.15 ಮತ್ತು 16 ರಂದು ಚಿತ್ರದುರ್ಗದ ಎಸ್.ಜೆ.ಎಂ.ಐ.ಟಿ.ಯಲ್ಲಿ ನಡೆಯಿತು. ವಿಟಿಯು ಬೆಂಗಳೂರು ಉಳಿದ ವಿಭಾಗದ ಚೆಸ್ ಚಾಂಪಿಯನ್‌ಶಿಪ್‌ನಲ್ಲಿ ರನ್ನರ್ ಅಪ್ ಟ್ರೋಫಿಯನ್ನು ಸಂತ ಜೋಸೆಫ್ ಇಂಜಿನಿಯರಿಂಗ್ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕಿ ವನೀಶಾ ವಿ. ರೋಡ್ರಿಗಸ್ ಮತ್ತು ಸಹಾಯಕ ಪಿಇಡಿ ಸುಧೀರ್ ಎಂ. ಅವರ ಮಾರ್ಗದರ್ಶನದಲ್ಲಿ ಪಡೆದುಕೊಂಡಿದ್ದಾರೆ.
ಇವರ ಸಾಧನೆಗಾಗಿ ಇಡೀ ತಂಡವನ್ನು ಮತ್ತು ದೈಹಿಕ ಶಿಕ್ಷಣ ನಿರ್ದೇಶಕರನ್ನು ಸಂತ ಜೋಸೆಫ್ ಇಂಜಿನಿಯರಿಂಗ್ ಕಾಲೇಜಿನ ಆಡಳಿತ ಮಂಡಳಿ ಅಭಿನಂದಿಸಿದೆ.
