ರಸ್ತೆಯಲ್ಲಿ ಉರುಳಿದ ಕಾರು: ಇಬ್ಬರಿಗೆ ಗಾಯ

ರಸ್ತೆಯಲ್ಲಿ ಉರುಳಿದ ಕಾರು: ಇಬ್ಬರಿಗೆ ಗಾಯ


ಮಂಗಳೂರು: ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದ ಘಟನೆ ನಗರ ಹೊರವಲಯದ ಕುಂಟಿಕಾನ ಜಂಕ್ಷನ್ ಬಳಿ ಇಂದು ರಂದು ಬೆಳಗ್ಗೆ ನಡೆದಿದೆ. ಘಟನೆಯಲ್ಲಿ ಇಬ್ಬರು ಗಾಯಗೊಂಡಿದ್ದಾರೆ. 

ಕೂಳೂರು ಕಡೆಯಿಂದ ಕೆಪಿಟಿ ಕಡೆಗೆ ಬರುತ್ತಿದ್ದ ಕಾರು ಕುಂಟಿಕಾನ ಜಂಕ್ಷನ್ ಬಳಿ ಚಾಲಕನ ನಿಯಂತ್ರಣ ತಪ್ಪಿ ಸ್ಕಿಡ್ಡಾಗಿ ರಸ್ತೆ ವಿಭಜಕದ ಮಧ್ಯೆ ಬಿದ್ದಿದೆ. ಇದರಿಂದ ಕಾರು ಚಲಾಯಿಸುತ್ತಿದ್ದ ವ್ಯಕ್ತಿ ಮತ್ತು ಆತನ ಪುತ್ರಿಗೆ ಸಣ್ಣ ಪ್ರಮಾಣದ ಗಾಯಗಳಾಗಿವೆ ಎಂದು ತಿಳಿದು ಬಂದಿದೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article