
Mangalore: ‘ಸೋನೆ ಮಳೆ-ಹಸಿರು ಇಳೆ’ ಕವಿಗೋಷ್ಠಿಗೆ ಕವನಗಳ ಆಹ್ವಾನ
Tuesday, July 9, 2024
ಮಂಗಳೂರು: ಅಖಿಲ ಭಾರತೀಯ ಸಾಹಿತ್ಯ ಪರಿಷತ್‌ನ ದ.ಕ.ಜಿಲ್ಲಾ ಘಟಕದ ವತಿಯಿಂದ ಪರಿಸರ ಅಧ್ಯಯನ ಕೇಂದ್ರ ನೆಲ್ಲಿಗುಡ್ಡೆ ಸಹಯೋಗದಲ್ಲಿ ಜು.17ರಂದು ಬೆಳಗ್ಗೆ 10ಕ್ಕೆ ಮಂಗಳೂರಿನ ಲಾಲ್‌ಬಾಗ್ ಬಳಿಯ ಇಂದಿರಾ ಪ್ರಿಯದರ್ಶಿನಿ ವನಿತಾ ಪಾರ್ಕ್‌ನಲ್ಲಿ ‘ಸೋನೆ ಮಳೆ-ಹಸಿರು ಇಳೆ ‘ಕವಿಗೋಷ್ಠಿ ಏರ್ಪಡಿಸಲಾಗಿದೆ. ಆಸಕ್ತ ಕವಿಗಳು ಕವಿಗೋಷ್ಠಿಯ ಸಂಯೋಜಕರಾದ ಡಾ.ಸುರೇಶ್ ನೆಗಳಗುಳಿ (9448216674) ಇವರನ್ನು ಸಂಪರ್ಕಿಸಿ ಹೆಸರು ನೋಂದಾಯಿಸುವಂತೆ ಅಭಾಸಾಪ ಜಿಲ್ಲಾ ಸಮಿತಿಯ ಪ್ರಧಾನ ಕಾರ್ಯದರ್ಶಿ ಸುಮಂಗಲಾ ರತ್ನಾಕರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.