
Mangalore: ದ.ಕ. ಜಿಲ್ಲೆಯಲ್ಲಿ ನೀರಿಗೆ ಇಳಿಯದಂತೆ ಜಿಲ್ಲಾಧಿಕಾರಿಗಳ ಆದೇಶ
Saturday, July 6, 2024
ಮಂಗಳೂರು: 2024-25ನೇ ಸಾಲಿನ ಮುಂಗಾರು ಅವಧಿಯಲ್ಲಿ ವ್ಯಾಪಕ ಮಳೆ ಆಗುತ್ತಿದ್ದು, ಈ ಸಂಬಂಧ ಯಾವುದೇ ಅವಘಡಗಳಿಗೆ ಆಸ್ಪದವಿರದಂತೆ ಮುನ್ನಚ್ಚರಿಕೆ ವಹಿಸಬೇಕಾಗಿರುವುದರಿಂದ ಜಿಲ್ಲೆಯಾದ್ಯಂತ ಇರುವ ಜಲಪಾತ, ಝರಿ, ನದಿ, ಸಮುದ್ರ, ಜಲಾಶಯದ ಪ್ರದೇಶಗಳಲ್ಲಿ ಸಾರ್ವಜನಿಕರು, ಪ್ರವಾಸಿಗರು ನೀರಿನಲ್ಲಿ ಇಳಿಯುವುದು, ಈಜುವುದು, ಸಾಹಸ ಚಟುವಟಿಕೆಗಳನ್ನು ನಡೆಸುವುದನ್ನು ನಿರ್ಬಂಧಿಸಿ ಮುಂದಿನ ಆದೇಶದವರೆಗೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾದಂಡಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ ಅದೇಶಿಸಿದ್ದಾರೆ.