Mangalore: ಶಕ್ತಿ ಕಾಲೇಜಿನಲ್ಲಿ ಪೋಕ್ಸೋ ಕಾಯ್ದೆ ಹಾಗೂ ಬಾಲ್ಯವಿವಾಹ ನಿಷೇದ ಕಾಯ್ದೆಯ ಬಗ್ಗೆ ಕಾನೂನು ಅರಿವು ಕಾರ್ಯಕ್ರಮ

Mangalore: ಶಕ್ತಿ ಕಾಲೇಜಿನಲ್ಲಿ ಪೋಕ್ಸೋ ಕಾಯ್ದೆ ಹಾಗೂ ಬಾಲ್ಯವಿವಾಹ ನಿಷೇದ ಕಾಯ್ದೆಯ ಬಗ್ಗೆ ಕಾನೂನು ಅರಿವು ಕಾರ್ಯಕ್ರಮ


ಮಂಗಳೂರು: ಜು.13 ರಂದು ಶಕ್ತಿ ಪದವಿ ಪೂರ್ವ ಕಾಲೇಜು ವತಿಯಿಂದ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಹಾಗೂ ಬಾಲ್ಯ ವಿವಾಹದ ಕುರಿತು ಜಾಗೃತಿ ಕಾರ್ಯಗಾರ ನಡೆಯಿತು. ಮಕ್ಕಳ ರಕ್ಷಣೆಯ ನಿರ್ಣಾಯಕ ಅಂಶಗಳ ಬಗ್ಗೆ ವಿದ್ಯಾರ್ಥಿಗಳು ಹಾಗೂ ಸಂಸ್ಥೆಯ ಉಪನ್ಯಾಸಕರಿಗೆ ಅರಿವು ಮೂಡಿಸಲಾಯಿತು.

ಎಸ್‌ಡಿಎಂ ಕಾನೂನು ಕಾಲೇಜಿನ ಪಿಜಿ ವಿಭಾಗದ ಪ್ರಾಧ್ಯಾಪಕಿ ಶಾರಿಕ ರೈ ಮಾತನಾಡಿ, ಪೋಕ್ಸೋ ಕಾಯ್ದೆ ಹಾಗೂ ಬಾಲ್ಯ ವಿವಾಹದ ಕುರಿತು ವಿವರಿಸಿದರು. ಲೈಂಗಿಕ ಕಿರುಕುಳ ಎಂದರೆ ಕೇವಲ ದೈಹಿಕವಾದ ಕಿರುಕುಳ ಅಷ್ಟೇ ಅಲ್ಲದೆ ಅಸಭ್ಯ ಮಾತು ಹಾಗೂ ಚಿತ್ರೀಕರಣ ತೋರಿಸುವುದು ಕೂಡಾ ಲೈಂಗಿಕ ದೌರ್ಜನ್ಯ ಎಂದು ಅವರು ಹೇಳಿದರು. ಅಪರಾಧ ನಡೆದಲ್ಲಿ ಯಾವ ರೀತಿ ಕಾನೂನಿನಲ್ಲಿ ಶಿಕ್ಷೆಯಾಗುತ್ತದೆ ಎಂಬುದರ ಬಗ್ಗೆ ಮಕ್ಕಳಿಗೆ ಮಾರ್ಗದರ್ಶನ ನೀಡಿದರು.

ಶಕ್ತಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ವೆಂಕಟೇಶ ಮೂರ್ತಿ, ಉಪಪ್ರಾಂಶುಪಾಲೆ ದಿವ್ಯಜ್ಯೋತಿ ಹಾಗೂ ಎಲ್ಲಾ ಉಪನ್ಯಾಸಕರು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಪದವಿ ಪೂರ್ವ ಕಾಲೇಜಿನ ಕನ್ನಡ ಉಪನ್ಯಾಸಕ ಸುನಿಲ್ ನಿರೂಪಿಸಿ, ಸ್ವಾಗತಿಸಿ, ವಂದಿಸಿದರು.







Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article