Moodubidire: ಸಿ.ಎ.: ಆಳ್ವಾಸ್ ವಿದ್ಯಾರ್ಥಿಗಳ ಅಭೂತಪೂರ್ವ ಸಾಧನೆ-38 ವಿದ್ಯಾಥಿಗಳು ಉತ್ತೀರ್ಣ,  ಒಲ್ವಿಟಾ ರಾಷ್ಟ್ರೀಯ ಮಟ್ಟದಲ್ಲಿ 23ನೇ ರ‍್ಯಾಂಕ್

Moodubidire: ಸಿ.ಎ.: ಆಳ್ವಾಸ್ ವಿದ್ಯಾರ್ಥಿಗಳ ಅಭೂತಪೂರ್ವ ಸಾಧನೆ-38 ವಿದ್ಯಾಥಿಗಳು ಉತ್ತೀರ್ಣ, ಒಲ್ವಿಟಾ ರಾಷ್ಟ್ರೀಯ ಮಟ್ಟದಲ್ಲಿ 23ನೇ ರ‍್ಯಾಂಕ್


ಮೂಡುಬಿದಿರೆ: ಮೇಯಲ್ಲಿ ನಡೆದ ಸಿ.ಎ. ಅಂತಿಮ ಪರೀಕ್ಷೆಯಲ್ಲಿ 25 ಮಂದಿ ವಿದ್ಯಾರ್ಥಿ, ಜನವರಿಯಲ್ಲಿ ನಡೆದ ಸಿಎ ಅಂತಿಮ ಪರೀಕ್ಷೆಯಲ್ಲಿ 25 ಮಂದಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವಿದ್ಯಾರ್ಥಿಗಳು ಉತ್ತೀರ್ಣರಾಗುವ ಮೂಲಕ ಸಾಧನೆ ಮಾಡಿದ್ದಾರೆ.  ಒಲ್ವಿಟಾ ಡಿಸೋಜ  ರಾಷ್ಟ್ರೀಯ ಮಟ್ಟದಲ್ಲಿ 23ನೇ ರ‍್ಯಾಂಕ್ ಪಡೆದಿದ್ದಾರೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. 

ಮೇ ತಿಂಗಳಲ್ಲಿ ನಡೆದ ಪರೀಕ್ಷೆಯಲ್ಲಿ ಸಂಸ್ಥೆಯ ಹಿರಿಯ ವಿದ್ಯಾರ್ಥಿಗಳಾದ ಒಲ್ವಿಟಾ ಆನ್ಸಿಲ್ಲಾ ಡಿಸೋಜ, ಪ್ರೀತಿಶ್ ಕುಡ್ವಾ, ಜೊನಿಟಾ ಜೋಶ್ನಿ ಸೋಜ, ಸಾಹುಲ್ ಹಮೀದ್, ಅನುಷಾ ಹೆಗ್ಡೆ, ಮೆಲ್ವಿನ್ ಜೋಸ್ವಿನ್ ಲೋಬೋ, ಪಲ್ಲವಿ ಎಚ್ ಆರ್, ಪ್ರಜ್ವಲ್, ವಿಲಿಟಾ ಆಲ್ವಿಶಾ ರೇಗೊ, ಆಂಚಲ್, ಸುಷ್ಮಾ ಎನ್, ಕಿರಣ್ ಚಂದ್ರಶೇಖರ್ ಶೇರಿಗಾರ್, ರೋಯ್ಡನ್, ಕೌಶಿಕ್, ಕಿರಣ್ ಭಾರಧ್ವಜ್, ರಜತ್ ಜೈನ್, ಶುಭಂಕರ್, ರಾಕೇಶ್, ಪ್ರಖ್ಯಾತ್, ಪವನ್, ನಾಗರಾಜ್ ಜಿ ಶೆಟ್ಟಿ, ಹೇಮಂತ್ ಕುಮಾರ್ ಡಿ.ಕೆ., ಶ್ರೀನಿಧಿ ಎಸ್. ಶೆಟ್ಟಿ, ಖುಶ್ಬೂ ಮತ್ತು ಗೀತಾ ನಿಶಾ ಪಿರೇರಾ ಉತ್ತೀರ್ಣರಾಗಿದ್ದಾರೆ.

ಜನವರಿಯಲ್ಲಿ ನಡೆದ ಪರೀಕ್ಷೆಯಲ್ಲಿ ಕ್ಲಾರ‍್ಸನ್, ಮೇಘಾ, ತೇಜಸ್, ವಾಣಿಶ್ರೀ, ಧಾಮಿನಿ, ದರ್ಶನ್ ಜಿ ಎಚ್, ಪ್ರಸಾದ, ನೌಫಾಲ್, ಅಂಕಿತಾ ಕಲ್ಲಪ್ಪ, ರಾಷ್ಟ್ರೀತ್ ಸಿ.ಜಿ, ಅವಿನಾಶ್, ಸುಕ್ಷ್ಮಾ, ಅಭಿಷೇಕ್ ಚೋಟಿ ಸೇರಿದಂತೆ 13 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಎಲ್ಲಾ ವಿದ್ಯಾರ್ಥಿಗಳು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಶೈಕ್ಷಣಿಕ ದತ್ತು ಶಿಕ್ಷಣ ಯೋಜನೆಯಡಿ ಉಚಿತ ಶಿಕ್ಷಣವನ್ನು ಪಡೆದವರಾಗಿದ್ದಾರೆ. ಇವರಲ್ಲಿ 10 ವಿದ್ಯಾರ್ಥಿಗಳು ಸಿ.ಎ. ಅಂತಿಮ ಪರೀಕ್ಷೆಯ ಗ್ರೂಪ್-01 ಮತ್ತು ಗ್ರೂಪ್-02 ಎರಡೂ ವಿಭಾಗಗಳನ್ನು ಪ್ರಥಮ ಪ್ರಯತ್ನದಲ್ಲೆ ಉತ್ತೀರ್ಣರಾಗಿ ಈ ಸಾಧನೆ ಮೆರೆದಿದ್ದಾರೆ ಎಂದು ಅವರು ತಿಳಿಸಿದ್ದಾರೆ.


ಕಿನ್ನಿಗೋಳಿ ಮೂಲದ ಒಲ್ವಿಟಾ ಆನ್ಸಿಲ್ಲಾ ಡಿಸೋಜ, ಆಳ್ವಾಸ್‌ನಲ್ಲೇ ಪದವಿಪೂರ್ವ ಹಾಗೂ ಪದವಿ ಶಿಕ್ಷಣವನ್ನು ಸಂಸ್ಥೆಯ ದತ್ತು ಶಿಕ್ಷಣ ಯೋಜನೆಯಲ್ಲಿ ವ್ಯಾಸಂಗ ಮಾಡಿದ್ದಾರೆ. 2019ರ ಸಾಲಿನ ಪದವಿಪೂರ್ವ ವಾಣಿಜ್ಯ ವಿಭಾಗದ ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ರ‍್ಯಾಂಕ್ ಪಡೆದ ಈಕೆ ನಂತರ ಪದವಿ ಶಿಕ್ಷಣದ ಜೊತೆಗೆ ಸಿ.ಎ. ಇಂಟರ್ ಮೀಡಿಯಟ್ ಪರೀಕ್ಷೆಯಲ್ಲಿ ರಾಷ್ಟ್ರೀಯ ಮಟ್ಟದಲ್ಲಿ 19ನೇ ರ‍್ಯಾಂಕ್ ಗಳಿಸಿದ್ದರು. ಇದೀಗ ಮೇ 2024 ರಲ್ಲಿ ಸಿ.ಎ. ಅಂತಿಮ ಪರೀಕ್ಷೆಯಲ್ಲಿ ರಾಷ್ಟ್ರೀಯ ಮಟ್ಟದಲ್ಲಿ 23ನೇ ರ‍್ಯಾಂಕ್ ಗಳಿಸಿ ತೇರ್ಗಡೆ ಹೊಂದಿದ್ದಾರೆ. 

ಈಕೆ ಒಲಿವರ್ ಉಬಾಲ್ಡ್ ಡಿಸೋಜ-ಅನಿತಾ ಮರಿಯಾ ಡಿಸೋಜ ದಂಪತಿಗಳ ಪುತ್ರಿ. ತಮ್ಮ ಆರ್ಟಿಕಲ್‌ಶಿಫ್‌ನ್ನು ಮಂಗಳೂರಿನ ಸಿ.ಎ. ನಿತಿನ್ ಜೆ. ಶೆಟ್ಟಿಯವರ ಮಾರ್ಗದರ್ಶನದಲ್ಲಿ ಪೂರೈಸಿದರು.



Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article