
Moodubidire: ನೆಲ್ಲಿಕಾರಿನಲ್ಲಿ ಸ್ತನ ಕ್ಯಾನ್ಸರ್ ಬಗ್ಗೆ ಮಾಹಿತಿ
Friday, July 5, 2024
ಮೂಡುಬಿದಿರೆ: ನೆಲ್ಲಿಕಾರು ಗ್ರಾಮ ಪಂಚಾಯತ್, ಸ್ತ್ರೀ ಶಕ್ತಿ ಗೊಂಚಲು ಸಮಿತಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಮಂಗಳೂರು ಗ್ರಾಮಾಂತರ ಹಾಗೂ ಮಂಗಳೂರು ಕೆಎಂಸಿ ತಜ್ಞ ವೈದ್ಯರಿಂದ ಸ್ತನ ಕ್ಯಾನ್ಸರ್ ಬಗ್ಗೆ ಮತ್ತು ಇತರೆ ವೈದ್ಯಕೀಯ ಮಾಹಿತಿ ಕಾರ್ಯಾಗಾರವು ಪಂಚಾಯತ್ ಸಭಾಂಗಣದಲ್ಲಿ ಶುಕ್ರವಾರ ನಡೆಯಿತು.
ನೆಲ್ಲಿಕಾರು ಗ್ರಾ.ಪಂಚಾಯತ್ ಅಧ್ಯಕ್ಷ ಉದಯ ಪೂಜಾರಿ, ಪಿಡಿಒ ಪ್ರಶಾಂತ್ ಶೆಟ್ಟಿ, ಅಂಗನವಾಡಿ ಮೇಲ್ವಿಚಾರಕಿ ಶುಭ ಹಾಗೂ ವೈದ್ಯರಾದ ಡಾ. ರಜತ್ ಮತ್ತು ಆಸ್ಪತ್ರೆಯ ಸಿಬ್ಬಂದಿಯವರು ಉಪಸ್ಥಿತರಿದ್ದರು.
ಪಂಚಾಯತ್ ಸಿಬ್ಬಂದಿ ಪ್ರಶಾಂತ್ ಕುಮಾರ್ ಜೈನ್ ಕಾರ್ಯಕ್ರಮ ನಿರೂಪಿಸಿದರು.