
Moodubidire: ನೆಲ್ಲಿಕಾರಿನಲ್ಲಿ ರೋಜ್ ಗಾರ್ ದಿವಸ್ ಕಾರ್ಯಕ್ರಮ
Friday, July 5, 2024
ಮೂಡುಬಿದಿರೆ: ತಾಲೂಕಿನ ನೆಲ್ಲಿಕಾರು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಶುಕ್ರವಾರ ರೋಜ್ ಗಾರ್ ದಿವಸ್ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.
ನರೇಗಾ ಯೋಜನೆಯಡಿಯಲ್ಲಿ ಕೈಗೊಳ್ಳಬಹುದಾದ ತೋಟಗಾರಿಕೆ ಹಾಗೂ ವಿವಿಧ ಕಾಮಗಾರಿಗಳು, ಹೊಸ ಕೆಲಸಗಳಿಗೆ ಅರ್ಜಿ ಸಲ್ಲಿಸುವಂತೆ ಐಇಸಿ ಸಂಯೋಜಕಿ ಅನ್ವಯ ತಿಳಿಸಿದರು.
ಅಂಗನವಾಡಿ ಮೇಲ್ವಿಚಾರಕಿ ಶುಭ ಕೂಸಿನ ಮನೆಯ ಮಾಹಿತಿಯನ್ನು ಸಂಕ್ಷಿಪ್ತವಾಗಿ ತಿಳಿಸಿದರು.
ಪಂಚಾಯತ್ ಅಧ್ಯಕ್ಷ ಉದಯ್ ಪೂಜಾರಿ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪ್ರಶಾಂತ್ ಶೆಟ್ಟಿ, ಪಂಚಾಯತ್ ಸಿಬ್ಬಂದಿಗಳು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು. ಪಂಚಾಯತ್ ಸಿಬ್ಬಂದಿ ಪ್ರಶಾಂತ್ ಜೈನ್ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.