ನಾಯಿಯ ಶವವನ್ನು ದ್ವಿಚಕ್ರ ವಾಹನಕ್ಕೆ ಕಟ್ಟಿ ಎಳೆದು ಕೊಂಡು ಹೋದ ವ್ಯಕ್ತಿ
Saturday, July 20, 2024
ಶಿರ್ವ: ನಾಯಿಯ ಶವವನ್ನು ತನ್ನ ದ್ವಿಚಕ್ರ ವಾಹನಕ್ಕೆ ಸರಪಳಿಯಿಂದ ಬಿಗಿದು ಶನಿವಾರ ಬೆಳಿಗ್ಗೆ ಶಿರ್ವ ಮುಖ್ಯ ರಸ್ತೆಯಲ್ಲಿ ಎಳೆದು ಕೊಂಡು ಹೋದ ಘಟನೆಯ ವೀಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದಂತೆ ಉಡುಪಿ ಜಿಲ್ಲಾ ಪ್ರಾಣಿದಯಾ ಸಂಘದ ಸದಸ್ಯೆ ಮಂಜುಳಾ ಕರ್ಕೆರಾ ಎಂಬವರು ಶಿರ್ವ ಪೋಲಿಸ್ ಠಾಣೆಗೆ ದೂರು ನೀಡಿದ ಹಿನ್ನೆಲೆಯಲ್ಲಿ ಪ್ರಕರಣ ದಾಖಲಾಗಿದೆ.
ಇದೊಂದು ಅಮಾನವೀಯ ಘಟನೆಯಾಗಿದ್ದು ತಪ್ಪಿದಸ್ತರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ. ಆ ವ್ಯಕ್ತಿ ಮಜೂರು ಸಮೀಪದ ಕೊಂಬಗುಡ್ಡೆ ನಿವಾಸಿ ಅಬ್ದುಲ್ ಖಾದರ್ ಎಂದು ತಿಳಿದುಬಂದಿದೆ.