ಕುಕ್ಕೆ ಸುಬ್ರಹ್ಮಣ್ಯ-ಮಂಜೇಶ್ವರ ಸಂಪರ್ಕ ಬಂದ್

ಕುಕ್ಕೆ ಸುಬ್ರಹ್ಮಣ್ಯ-ಮಂಜೇಶ್ವರ ಸಂಪರ್ಕ ಬಂದ್


ಸುಬ್ರಹ್ಮಣ್ಯ: ದರ್ಪಣತೀರ್ಥ ನದಿಯು ತುಂಬಿ ಹರಿದ ಕಾರಣ ಕುಕ್ಕೆಸುಬ್ರಹ್ಮಣ್ಯ-ಪುತ್ತೂರು-ಮಂಜೇಶ್ವರ ಅಂತರ್ ರಾಜ್ಯ ಹೆದ್ದಾರಿಯ ದರ್ಪಣತೀರ್ಥ ಸೇತುವೆಯು ಮುಳುಗಡೆಗೊಂಡಿತು. ನದಿ ನೀರು ಸುಮಾರು ಅರ್ಧ ಕಿ.ಮೀ ದೂರದ ತನಕ ಹೆದ್ದಾರಿಯನ್ನು ಆಕ್ರಮಿಸಿಕೊಂಡಿತ್ತು. ದರ್ಪಣತೀರ್ಥ ಸೇತುವೆಯಿಂದ ಸುಮಾರು 100ಮೀ ದೂರವಿರುವ ತಿರುಗಣೆಗುಂಡಿ ತನಕ ಹೆದ್ದಾರಿಯನ್ನು ಪ್ರವಾಹ ಆಕ್ರಮಿಸಿಕೊಂಡಿದೆ. ದರ್ಪಣ ತೀರ್ಥ ನದಿ ದಡದ ಎಲ್ಲಾ ಕೃಷಿ ತೋಟಗಳು ನೀರಿನಿಂದ ತುಂಬಿತ್ತು.ಸಮೀಪದ ಮನೆಗಳು ಜಲಾವೃತಗೊಂಡಿತ್ತು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article