
Udupi: ತ್ಯಾಜ್ಯ ವಿಲೇ ವಿಚಾರ: ಬಿಜೆಪಿ-ಕಾಂಗ್ರೆಸ್ ಸದಸ್ಯರ ನಡುವೆ ಜಟಾಪಟಿ: ಓರ್ವರಿಗೆ ಗಾಯ
ಉಡುಪಿ: ಮದ ತ್ಯಾಜ್ಯ ವಿಲೇವಾರಿ ವಿಚಾರದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ, ಕಾಂಗ್ರೆಸ್ ಸದಸ್ಯರ ನಡುವೆ ಜಟಾಪಟಿ ನಡೆದ ಘಟನೆ ತೆಂಕನಿಡಿಯೂರು ಗ್ರಾಮ ಪಂಚಾಯತ್‌ನಲ್ಲಿ ಶುಕ್ರವಾರ ನಡೆದಿದೆ.
ಗ್ರಾಮ ಪಂಚಾಯತ್ ಅಧ್ಯಕ್ಷೆ ಸುಮಾರು 50 ಲೋಡ್ ತ್ಯಾಜ್ಯ ಹೂತು ಹಾಕಿರುವ ಹಿನ್ನೆಲೆಯಲ್ಲಿ ಬಾವಿ ನೀರು ಕಲುಷಿತಗೊಳ್ಳುತ್ತಿದೆ. ಅದನ್ನು ಕೂಡಲೇ ವಿಲೇವಾರಿ ಮಾಡುವಂತೆ ಗ್ರಾಮಸ್ಥರು ಪಂಚಾಯತ್ ಅಧ್ಯಕ್ಷೆ ಶೋಭಾ ನಾಯ್ಕ್ ವಿರುದ್ಧ ಪ್ರತಿಭಟನೆ ನಡೆಸಿದರು.
ಕಳೆದ ಕೆಲವು ದಿನಗಳಿಂದ ಈ ಬಗ್ಗೆ ವಾದ ವಿವಾದ ನಡೆದಿದ್ದು, ಈ ಸಂಬಂಧ ತಾ.ಪಂ. ಕಾರ‍್ಯನಿರ್ವಹಣಾಧಿಕಾರಿ ಹಾಗೂ ಪಂಚಾಯತ್ ಪಿಡಿಓ ನೇತೃತ್ವದಲ್ಲಿ ಇಂದು ಸಭೆ ಕರೆಯಲಾಗಿತ್ತು. ಈ ಸಭೆಗೆ ಕೋರಂ ಕೊರತೆ ಹಿನ್ನೆಲೆಯಲ್ಲಿ ಬಿಜೆಪಿ ಸದಸ್ಯರು ವಿರೋಧ ವ್ಯಕ್ತಪಡಿಸಿದರು.
ಸಭೆಗೆ ಮೂವರು ಸದಸ್ಯರು ಗೈರಾಗಿದ್ದು ಸಭೆ ನಡೆಸಲು ಬಿಡುವುದಿಲ್ಲ ಎಂದು ಬಿಜೆಪಿ ಸದಸ್ಯರು ವಿರೋಧ ವ್ಯಕ್ತಪಡಿಸಿದಾಗ ಮಧ್ಯಪ್ರವೇಶಿಸಿದ ಕಾಂಗ್ರೆಸ್ ಸದಸ್ಯರು ಬಿಜೆಪಿ ಸದಸ್ಯರನ್ನು ಸಭೆಯಿಂದ ಹೊರದೂಡಲು ಯತ್ನಿಸಿದು. ಆ ವೇಳೆ ಮಾತಿಗೆ ಮಾತು ಬೆಳೆದು ಇಒ, ಪೊಲೀಸರ ಎದುರೇ ಪರಸ್ಪರ ಎಳೆದಾಡಿಕೊಂಡರು. ಗ್ರಾ.ಪಂ. ಮಹಿಳಾ ಸದಸ್ಯೆಯೊಬ್ಬರು ಗಾಯಗೊಂಡರು.
ಸುಮಾರು ಅರ್ಧ ಗಂಟೆ ಕಾಲ ಬಿಗುವಿನ ವಾತಾವರಣ ಉಂಟಾಗಿದ್ದು, ಸ್ಥಳಕ್ಕೆ ಶಾಸಕ ಯಶಪಾಲ್ ಸುವರ್ಣ ಆಗಮಿಸಿದರು. ತ್ಯಾಜ್ಯ ತೆರವಿಗೆ ಸೂಚಿಸಿದರು. ಆ ವೇಳೆಗೆ ಗ್ರಾಮಸ್ಥರೂ ಜಮಾಯಿಸಿದ್ದರು.
ಬಿಜೆಪಿ ಸದಸ್ಯರು ಸಭೆಯಿಂದ ಹೊರನಡೆದು ಕಾಂಗ್ರೆಸ್ ಸದಸ್ಯರ ವಿರುದ್ಧ ಠಾಣೆಗೆ ದೂರು ನೀಡಲು ನಿರ್ಧರಿಸಿದರು.