Udupi: ಹಿಂದೂಗಳ ತಾಳ್ಮೆ ಪರೀಕ್ಷೆಯ ದುಸ್ಸಾಹಸ ಬೇಡ: ಯಶ್‌ಪಾಲ್ ಸುವರ್ಣ

Udupi: ಹಿಂದೂಗಳ ತಾಳ್ಮೆ ಪರೀಕ್ಷೆಯ ದುಸ್ಸಾಹಸ ಬೇಡ: ಯಶ್‌ಪಾಲ್ ಸುವರ್ಣ

ಉಡುಪಿ: ಲೋಕಸಭೆಯಲ್ಲಿ ವಿಪಕ್ಷ ನಾಯಕನ ಜವಾಬ್ದಾರಿ ಹುದ್ದೆಯಲ್ಲಿರುವ ರಾಹುಲ್ ಗಾಂಧಿ, ಮತೀಯ ಅಲ್ಪಸಂಖ್ಯಾತರ ಓಲೈಕೆಗಾಗಿ ಹಿಂದುತ್ವ, ರಾಷ್ಟ್ರೀಯ ಸ್ವಯಂ ಸೇವಕ ಸಂಘ, ಪ್ರಧಾನಿ ನರೇಂದ್ರ ಮೋದಿಅವರನ್ನು ಅವಹೇಳನ ಮಾಡುವ ಮೂಲಕ ತನ್ನ ನೈತಿಕ ಅಧಃಪತನವನ್ನು ಜಗಜ್ಜಾಹೀರುಮಾಡಿದ್ದು, ಹಿಂದೂಗಳ ತಾಳ್ಮೆ ಪರೀಕ್ಷೆ ಮಾಡುವ ದುಸ್ಸಾಹಸಕ್ಕೆ ಮುಂದಾಗಬೇಡಿ ಎಂದು ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹಿಂದೂ ಧರ್ಮಕ್ಕೆ ಪ್ರೀತಿ ಸಹೋದರತೆಯ ಪಾಠ ಮಾಡುವ ಮೊದಲು ಅಂದು ೫ ಲಕ್ಷ ಕಾಶ್ಮೀರಿ ಹಿಂದೂಗಳನ್ನು ಓಡಿಸಿದವರು, ಅಮಾಯಕ ಕನಯ್ಯಲಾಲ್‌ನನ್ನು ಹತ್ಯೆ ಮಾಡಿದವರು, ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿದವರು, ಡಿಜೆ ಹಳ್ಳಿ, ಕೆಜೆ ಹಳ್ಳಿಯಲ್ಲಿ ದಲಿತನ ಮನೆ ಪೊಲೀಸ್ ಠಾಣೆಗೆ ಬೆಂಕಿ ಇಟ್ಟವರು, ಪಿಎಫ್‌ಐ ಜೊತೆ ಸೇರಿ ಭಯೋತ್ಪಾದನೆ ಮಾಡಿ ದೇಶದ್ರೋಹ ಮಾಡಿದವರು, ಉಡುಪಿ ಶಾಲೆಯಲ್ಲಿ ಹಿಜಾಬ್ ವಿವಾದ ಸೃಷ್ಟಿಸಿ ಶಿಕ್ಷಣ ವ್ಯವಸ್ಥೆಗೆ ಧಕ್ಕೆ ತಂದವರು ಯಾರು ಎಂಬುದನ್ನು ಕೂಡಾ ಲೋಕಸಭೆಯಲ್ಲಿ ಹೇಳುವ ಧೈರ್ಯ ರಾಹುಲ್ ಗಾಂಧಿಗೆ ಇದೆಯೇ ಎಂದು ಯಶಪಾಲ್ ಪ್ರಶ್ನಿಸಿದ್ದಾರೆ.

ಹಿಂದೂ ಧರ್ಮಕ್ಕೆ ಹಿಂಸೆಯ ಬಣ್ಣ ಬಳಿಯುವ ಮೂಲಕ ಸನಾತನ ಹಿಂದೂ ಧರ್ಮಕ್ಕೆ ರಾಹುಲ್ ಗಾಂಧಿ ಅಪಮಾನ ಮಾಡಿದ್ದಾರೆ. ಜಾಗೃತ ಹಿಂದೂ ಸಮಾಜ ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಉತ್ತರ ನೀಡುವ ಅನಿವಾರ್ಯತೆ ಇದೆ ಎಂದು ಶಾಸಕ ಯಶಪಾಲ್ ಸುವರ್ಣ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article