ಪತ್ರಿಕೋದ್ಯಮ ಜನಸಾಮಾನ್ಯರ ಆಶೋತ್ತರಗಳಿಗೆ ಸ್ಪಂದಿಸುವ ಕೊಂಡಿ: ಡಾ. ಕೆ ವಿದ್ಯಾಕುಮಾರಿ

ಪತ್ರಿಕೋದ್ಯಮ ಜನಸಾಮಾನ್ಯರ ಆಶೋತ್ತರಗಳಿಗೆ ಸ್ಪಂದಿಸುವ ಕೊಂಡಿ: ಡಾ. ಕೆ ವಿದ್ಯಾಕುಮಾರಿ


ಉಡುಪಿ: ಪತ್ರಿಕೋದ್ಯಮ ಸಮಾಜದ ಆಗುಹೋಗುಗಳ ಜೊತೆಗೆ ಜನಸಾಮಾನ್ಯರ ಆಶೋತ್ತರಗಳಿಗೆ ಸ್ಪಂದಿಸುವ ಕೊಂಡಿಯಂತಿದೆ ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಹೇಳಿದರು.

ಅಜ್ಜರಕಾಡು ಡಾ. ಜಿ.ಶಂಕರ್ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿ ಜಿಲ್ಲಾಡಳಿತ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಡಾ. ಜಿ. ಶಂಕರ್ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಹಾಗೂ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಸಂಯುಕ್ತ ಆಶ್ರಯದಲ್ಲಿ ಸೋಮವಾರ ನಡೆದ ಪತ್ರಿಕಾ ದಿನಾಚರಣೆ ಕಾರ್ಯಕ್ರಮವನ್ನು ಗಿಡಕ್ಕೆ ನೀರು ಎರೆಯುವ ಮೂಲಕ ಉದ್ಘಾಟಿಸಿ ಮಾತನಾಡಿದರು.

ಪ್ರತಿಯೊಬ್ಬರೂ ತಮ್ಮ ದೈನಂದಿನ ಜೀವನದಲ್ಲಿ ಪತ್ರಿಕೆಗಳನ್ನು ಓದುವ ಹವ್ಯಾಸ ರೂಢಿಸಿಕೊಳ್ಳಬೇಕು. ಅದರಿಂದ ಜ್ಞಾನಾರ್ಜನೆ ಹಾಗೂ ಮಾಹಿತಿ ಲಭಿಸುತ್ತದೆ ಎಂದರು.

ಸರಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನ ಆಂಗ್ಲ ಭಾಷಾ ಉಪನ್ಯಾಸಕಿ ಭವ್ಯ ನಾಗರಾಜ್ ಉಪನ್ಯಾಸ ನೀಡಿ, ದೇಶದಲ್ಲಿ ಹಾಗೂ ರಾಜ್ಯದಲ್ಲಿ ಪತ್ರಿಕೋದ್ಯಮ ಬೆಳೆದುಬಂದ ಹಾದಿಯನ್ನು ಸವಿಸ್ತಾರವಾಗಿ ವಿವರಿಸಿದರು. ದಿನದಿಂದ ದಿನಕ್ಕೆ ಪತ್ರಿಕೋದ್ಯಮ ಬೆಳವಣಿಗೆ ಕಂಡುಕೊಳ್ಳುತ್ತಿದೆ. ಈಮಧ್ಯೆ ಅನೇಕ ಸವಾಲುಗಳನ್ನು ಎದುರಿಸುತ್ತಲೇ ಪತ್ರಿಕೋದ್ಯಮ ಸಮಾಜದಲ್ಲಿ ತನ್ನದೇ ಆದ ಛಾಪು ಮೂಡಿಸಿದೆ ಎಂದರು.

ಜಿಲ್ಲಾ ವಾರ್ತಾಧಿಕಾರಿ ಮಂಜುನಾಥ್ ಬಿ ಪ್ರಾಸ್ತಾವಿಕವಾಗಿ ಮಾತನಾಡಿ, ಜನಸಾಮಾನ್ಯರಿಗೆ ಪತ್ರಿಕೋದ್ಯಮದ ಪರಿಚಯ, ಅದರ ಹಿನ್ನೆಲೆ, ಕಾಲಕಾಲಕ್ಕೆ ತಕ್ಕಂತೆ ಆದ ಬದಲಾದ ವೈಖರಿ ಹಾಗೂ ಪ್ರಸ್ತುತ ವೃತ್ತಿಯಲ್ಲಿ ತೊಡಗಿಕಂಡವರು ಮಾಡಿಕೊಳ್ಳಬೇಕಾದ ಬದಲಾವಣೆ ಕುರಿತು ಅವಲೋಕನ ಮಾಡಿಕೊಳ್ಳಲು ಪತ್ರಿಕಾ ದಿನಾಚರಣೆ ಹಮ್ಮಿಕೊಳ್ಳಲಾಗಿದೆ. ಮಾನವನ ಸರ್ವತೋಮುಖ ಅಭಿವೃದ್ಧಿ, ಬೆಳವಣಿಗೆಯಲ್ಲಿ ಪತ್ರಿಕೋದ್ಯಮ ಮಹತ್ತರ ಪಾತ್ರ ವಹಿಸುವುದರೊಂದಿಗೆ ಸಮಾಜದಲ್ಲಿ ಜಾಗೃತಿ ಮೂಡಿಸುವಲ್ಲಿ ತನ್ನದೇ ಆದ ಪಾತ್ರ ವಹಿಸಿದೆ. ಜೊತೆಗೆ ಸ್ವಸ್ಥ ಸಮಾಜ ನಿರ್ಮಾಣಕ್ಕೆ ತನ್ನದೇ ಆದ ಕೊಡುಗೆ ನೀಡುತ್ತಾ ಬಂದಿದೆ ಎಂದರು.

ಕಾಲೇಜಿನ ಪ್ರಾಂಶುಪಾಲ ಪ್ರೊ. ಭಾಸ್ಕರ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ರಾಜೇಶ್ ಶೆಟ್ಟಿ ಅಲೆವೂರು, ಕರ್ನಾಟಕ ಪತ್ರಕರ್ತರ ಸಂಘದ ರಾಜ್ಯ ಸಮಿತಿ ಸದಸ್ಯ ಕಿರಣ್ ಮಂಜನಬೈಲು, ಕಾಲೇಜಿನ ಕಲಾ ನಿಕಾಯ ಡೀನ್ ಡಾ| ನಿಕೇತನ ಇದ್ದರು.

ಈ ಸಂದರ್ಭದಲ್ಲಿ ಹಿರಿಯ ವರದಿಗಾರ ಬಿ.ಬಿ. ಶೆಟ್ಟಿಗಾರ್ ಅವರನ್ನು ಸನ್ಮಾನಿಸಲಾಯಿತು.

ಪತ್ರಕರ್ತ ಅಜಿತ್ ಸನ್ಮಾನಿತರನ್ನು ಪರಿಚಯಿಸಿದರು. ಕಾಲೇಜಿನ ಪತ್ರಿಕೋದ್ಯಮ ವಿದ್ಯಾರ್ಥಿನಿ ಅಶ್ವಿನಿ ನಿರೂಪಿಸಿ, ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ನಝೀರ್ ಪೊಲ್ಯ ವಂದಿಸಿದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article