ಬಿಜೆಪಿ ಜಿಲ್ಲಾ ವಿಶೇಷ ಕಾರ್ಯಕಾರಿಣಿ

ಬಿಜೆಪಿ ಜಿಲ್ಲಾ ವಿಶೇಷ ಕಾರ್ಯಕಾರಿಣಿ

ಉಡುಪಿ: ಬಿಜೆಪಿ ಉಡುಪಿ ಜಿಲ್ಲಾ ವಿಶೇಷ ಕಾರ್ಯಕಾರಿಣಿ ಸಭೆ ಜುಲೈ 20ರಂದು ಬನ್ನಂಜೆ ಹೋಟೆಲ್ ಶಾರದಾ ಇಂಟರ್ ನ್ಯಾಷನಲ್ ಸಭಾಂಗಣದಲ್ಲಿ ನಡೆಯಲಿದೆ. ಬೆಳಿಗ್ಗೆ 10ಕ್ಕೆ ಸಕಲೇಶಪುರ ಶಾಸಕ, ಬಿಜೆಪಿ ಎಸ್.ಸಿ. ಮೋರ್ಚಾ ರಾಜ್ಯಾಧ್ಯಕ್ಷ ಸಿಮೆಂಟ್ ಮಂಜು ಉದ್ಘಾಟಿಸಲಿದ್ದಾರೆ.

ಅಪರಾಹ್ನ 1 ಗಂಟೆಗೆ ನಡೆಯುವ ಸಮಾರೋಪ ಸಮಾರಂಭದಲ್ಲಿ ಸಂಸದ ಕೋಟ ಶ್ರೀನಿವಾಸ ಪೂಜಾರಿ ಭಾಗವಹಿಸುವರು. ಜಿಲ್ಲೆಯ ಎಲ್ಲಾ ಶಾಸಕರು, ವಿಧಾನ ಪರಿಷತ್ ಸದಸ್ಯರು, ಮಾಜಿ ಸಚಿವರು, ಮಾಜಿ ಶಾಸಕರು, ಪಕ್ಷದ ಪ್ರಮುಖರು, ಬಿಜೆಪಿ ಜಿಲ್ಲಾ ಪದಾಧಿಕಾರಿಗಳು ಭಾಗವಹಿಸುವರು ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ತಿಳಿಸಿದ್ದಾರೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article