
Udupi: ರಜೆ ನೀಡುವ ಅಧಿಕಾರ ಬಿಇಓಗಳಿಗೆ: ಡಾ. ಕೆ. ವಿದ್ಯಾಕುಮಾರಿ
Monday, July 8, 2024
ಉಡುಪಿ: ಮಳೆಯ ಪರಿಸ್ಥಿತಿ ಅವಲೋಕಿಸಿ ಶಾಲೆಗಳಿಗೆ ರಜೆ ನೀಡುವ ಅಧಿಕಾರವನ್ನು ಸ್ಥಳೀಯ ಕ್ಷೇತ್ರ ಶಿಕ್ಷಣಾಧಿಕಾರಿ (ಬಿಇಓ)ಗಳಿಗೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ತಿಳಿಸಿದ್ದಾರೆ.
ಜಿಲ್ಲೆಯ ಕೆಲವು ತಾಲೂಕುಗಳಲ್ಲಿ ಭಾರೀ ಮಳೆಯಾಗುತ್ತಿದ್ದು ಅಗತ್ಯ ಕಂಡುಬಂದಲ್ಲಿ ಶಾಲಾ ಕಾಲೇಜುಗಳಿಗೆ ರಜೆ ನೀಡಬಹುದು.
ಉಡುಪಿ ಜಿಲ್ಲೆಯಲ್ಲಿ ಮಳೆಯಾಗುತ್ತಿದೆಯಾದರೂ ಎಲ್ಲಾ ಏಳೂ ತಾಲೂಕುಗಳಲ್ಲಿ ನಿರಂತರ ತೀವ್ರ ಮಳೆ ಇಲ್ಲ. ಕೆಲವೆಡೆ ಮಳೆ ಕಡಿಮೆಯಾಗಿದ್ದು ಪರಿಸ್ಥಿತಿ ಅವಲೋಕಿಸಿ ರಜೆ ಘೋಷಿಸುವ ಅಧಿಕಾರವನ್ನು ತಾಲೂಕು ಶಿಕ್ಷಣಾಧಿಕಾರಿಗಳಿಗೆ ನೀಡಲಾಗಿದೆ.
ಆದರೆ, ಮುಂಜಾಗ್ರತಾ ಕ್ರಮವಾಗಿ ಕೆಲವು ಶಾಲಾಡಳಿತ ಮಂಡಳಿಯವರೂ ಪರಿಸ್ಥಿತಿ ನೋಡಿಕೊಂಡು ರಜೆ ನೀಡಿದ್ದಾರೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.