Udupi: ಶಿವಮಾಡಿಗೆ ಸಂಸದ ಚೌಟ ಭೇಟಿ
Tuesday, July 16, 2024
ಉಡುಪಿ: ದಕ್ಷಿಣ ಕನ್ನಡ ಜಿಲ್ಲೆಯ ನೂತನ ಸಂಸದ ಕ್ಯಾ. ಬ್ರಿಜೇಶ್ ಚೌಟ ಮಣಿಪಾಲ ಸಮೀಪದ ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನಕ್ಕೆ ಆಗಮಿಸಿ ದೇವರ ದರ್ಶನ ಪಡೆದರು. ಅನ್ನ ಸಂತರ್ಪಣೆ ಸೇವೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಮೊಕ್ತೇಸರ ಮಹೇಶ್ ಠಾಕೂರ್, ಶುಭಕರ ಸಾಮಂತ್, ದೇವಸ್ಥಾನದ ಅಭಿವೃದ್ಧಿ ಟ್ರಸ್ಟ್ ಅಧ್ಯಕ್ಷ ದಿನೇಶ್ ಪ್ರಭು, ಟ್ರಸ್ಟಿಗಳಾದ ಸತೀಶ್ ಪಾಟೀಲ್, ಮಂಗಳೂರು ಬಿಜೆಪಿ ಕೋಶಾಧಿಕಾರಿ ಸಂಜಯ್ ಪ್ರಭು, ದೇವಸ್ಥಾನದ ಕೋಶಾಧಿಕಾರಿ ಶ್ರೀಕಾಂತ್ ಪ್ರಭು ಮೊದಲಾದವರಿದ್ದರು.