
Ujire: ಅಭಿಷೇಕ್ ಎಚ್.ಜಿ. ಸಿ.ಇ.ಟಿ.ಯಲ್ಲಿ 20ನೇ ರ‍್ಯಾಂಕ್
Tuesday, July 2, 2024
ಉಜಿರೆ: ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಿಕ್ ಕಾಲೇಜಿನ ಕಂಪ್ಯೂಟರ್ ಸೈನ್ಸ್ ಇಂಜಿನೀಯರಿಂಗ್ ವಿಭಾಗದ ವಿದ್ಯಾರ್ಥಿ ಅಭಿಷೇಕ್ ಹೆಚ್.ಜಿ. ಜೂನ್‌ನಲ್ಲಿ ನಡೆದ ಡಿಪ್ಲೋಮ ಸಿಇಟಿಯಲ್ಲಿ ರಾಜ್ಯಕ್ಕೆ 20ನೇ ರ‍್ಯಾಂಕ್ ಪಡೆದು ಉತ್ಕೃಷ್ಟ ಸಾಧನೆಗೈದಿದ್ದಾರೆ.
ವಿದ್ಯಾರ್ಥಿಯ ಸಾಧನೆಗೆ ಸಂಸ್ಥೆಯ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕರು ಹಾಗೂ ಸಿಬ್ಬಂದಿ ವರ್ಗದವರು ಅಭಿನಂದಿಸಿ ಶುಭ ಹಾರೈಸಿದ್ದಾರೆ.