Ujire: ಧರ್ಮಸ್ಥಳದಲ್ಲಿ 53ನೇ ವರ್ಷದ ಪುರಾಣವಾಚನ ಪ್ರವಚನ ಕಾರ್ಯಕ್ರಮ

Ujire: ಧರ್ಮಸ್ಥಳದಲ್ಲಿ 53ನೇ ವರ್ಷದ ಪುರಾಣವಾಚನ ಪ್ರವಚನ ಕಾರ್ಯಕ್ರಮ

ಉಜಿರೆ: ಧರ್ಮಸ್ಥಳದಲ್ಲಿ 53ನೆ ವರ್ಷದ ಪುರಾಣ ವಾಚನ-ಪ್ರವಚನ ಕಾರ್ಯಕ್ರಮವು ಜು.16 ರಿಂದ ಸೆಪ್ಟೆಂಬರ್ 17ರ ವರೆಗೆ ನಡೆಯಲಿದೆ ಎಂದು ಪುರಾಣ ವಾಚನ-ಪ್ರವಚನ ಸಮಿತಿಯ ಸಂಚಾಲಕ ಎ.ವಿ. ಶೆಟ್ಟಿ ತಿಳಿಸಿದ್ದಾರೆ.

ಪ್ರತಿ ದಿನ ಸಂಜೆ ಗಂಟೆ 6.30 ರಿಂದ ರಾತ್ರಿ 8 ಗಂಟೆ ವರೆಗೆ ದೇವಸ್ಥಾನದ ಎದುರು ಇರುವ ಪ್ರವಚನ ಮಂಟಪದಲ್ಲಿ ಪುರಾಣ ವಾಚನ-ಪ್ರವಚನ ನಡೆಯಲಿದೆ. ಈ ಬಾರಿ ‘ಜೈಮಿನಿ ಭಾರತ’ ಮತ್ತು ‘ತುರಂಗ ಭಾರತ’ ಕೃತಿಗಳ ವಾಚನ-ಪ್ರವಚನ ನಡೆಯಲಿದ್ದು, ಶನಿವಾರ ಮತ್ತು ಭಾನುವಾರಗಳಲ್ಲಿ ವಿವಿಧ ಕಾವ್ಯಗಳ ಆಯ್ದ ಭಾಗದ ವಾಚನ-ಪ್ರವಚನ ನಡೆಯಲಿದೆ.

ಉದ್ಘಾಟನಾ ಸಮಾರಂಭ: 

ಜುಲೈ 16 ರಂದು ಸಂಜೆ ಗಂಟೆ 5.30ಕ್ಕೆ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಮತ್ತು ಹೇಮಾವತಿ ವೀ. ಹೆಗ್ಗಡೆ ಅವರು ಪುರಾಣ ವಾಚನ-ಪ್ರವಚನ ಕಾರ್ಯಕ್ರಮವನ್ನು ಉದ್ಘಾಟಿಸುವರು.

ಬಳಿಕ ಜೈಮಿನಿ ಭಾರತದ ಪೀಠಿಕಾಸಂಧಿ ಮತ್ತು ಎರಡನೆ ಸಂಧಿಯನ್ನು ಕಾವ್ಯಶ್ರೀ ಅಜೇರು ವಾಚನ ಮಾಡಿದರೆ, ಹವ್ಯಾಸಿ ಯಕ್ಷಗಾನ ಕಲಾವಿದ ಉಜಿರೆ ಅಶೋಕ ಭಟ್  ಪ್ರವಚನ ನಿಡುವರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article