
Ujire: ವಿದ್ಯಾರ್ಥಿಗಳಿಗೆ ಓರಿಯೆಂಟೇಶನ್ ಕಾರ್ಯಕ್ರಮ
Tuesday, July 2, 2024
ಉಜಿರೆ: ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಿಕ್ ಕಾಲೇಜಿನ ಪ್ರಥಮ ವರ್ಷಕ್ಕೆ ದಾಖಲಾಗಿದ್ದ ವಿದ್ಯಾರ್ಥಿಗಳಿಗೆ ಕಾಲೇಜು ಹಾಗೂ ಶೈಕ್ಷಣಿಕ ವಿಷಯಗಳ ಬಗ್ಗೆ ಮಾಹಿತಿ ನೀಡುವ ವಿಶೇಷ ಓರಿಯಂಟೇಷನ್ ಕಾರ್ಯಕ್ರಮ-2024 ಆಯೋಜಿಸಲಾಯಿತು. ಕಾಲೇಜಿನ ಪ್ರಾಂಶುಪಾಲ ಸಂತೋಷ್ ಅವರು ಕಾಲೇಜು ಮತ್ತು ವಿದ್ಯಾರ್ಥಿಗಳ ಆಯ್ಕೆಯ ವಿವಿಧ ಕೋರ್ಸುಗಳ ಬಗ್ಗೆ ಸಮಗ್ರ ಮಾಹಿತಿ ನೀಡಿದರು.
ಇದೆ ಸಂದರ್ಭದಲ್ಲಿ ಸಿವಿಲ್ ವಿಭಾಗ ಮುಖ್ಯಸ್ಥ ಮತಿ ತೃಪ್ತಿ, ಎಲೆಕ್ಟ್ರಾನಿಕ್ಸ್ ಅಂಡ್ ಕಮ್ಯುನಿಕೇಶನ್ ವಿಭಾಗದ ಮುಖ್ಯಸ್ಥೆ ಮೇರಿ ಸ್ಮಿತಾ, ಕಂಪ್ಯೂಟರ್ ಸೈನ್ಸ್ ವಿಭಾಗದ ಮುಖ್ಯಸ್ಥ ದಿನೇಶ್, ಮೆಕ್ಯಾನಿಕಲ್ ಎಂಜಿನಿಯರಿಂಗ್ ವಿಭಾಗದ ಮುಖ್ಯಸ್ಥ ಶ್ರೇಯಾಂಕ್ ಉಪಸ್ಥಿತರಿದ್ದು ವಿಭಾಗದ ಶೈಕ್ಷಣಿಕ ಮಾಹಿತಿ ನೀಡಿದರು.
ಕಾಲೇಜಿನ ಪ್ರಾದ್ಯಾಪಕ ಈಶ್ವರ್ ಉಪಸ್ಥಿತರಿದ್ದರು. ಸಾಯಿ ಚರಣ್ ಪ್ರಾರ್ಥಿಸಿದರು. ಶಿವಪ್ರಸಾದ್ ಸ್ವಾಗತಿಸಿ, ಸಂಪತ್ ಕುಮಾರ್ ನಿರೂಪಿಸಿದರು. ಈಶ್ವರ್ ಶರ್ಮಾ ವಂದಿಸಿದರು. ಕಾರ್ಯಕ್ರಮದಲ್ಲಿ ಪ್ರಥಮ ವರ್ಷದ ವಿದ್ಯಾರ್ಥಿಗಳು ಮತ್ತು ಅವರ ಹೆತ್ತವರು ಹಾಗೂ ಕಾಲೇಜು ಸಿಬ್ಬಂದಿಗಳು ಉಪಸ್ಥಿತರಿದ್ದರು.