
Ujire: ‘ಸಿರಿ ಧಾನ್ಯ ಸಿರಿ-ಸರಿ’ ಕೃತಿ ಬಿಡುಗಡೆ
Tuesday, July 9, 2024
ಉಜಿರೆ: ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಆಶ್ರಯದಲ್ಲಿ ಪ್ರಕಟಿಸಿದ ‘ಸಿರಿ ಧಾನ್ಯ ಸಿರಿ-ಸರಿ’ ಕೃತಿಯನ್ನು ಧರ್ಮಸ್ಥಳದಲ್ಲಿ ಹೇಮಾವತಿ ವೀ. ಹೆಗ್ಗಡೆ ಅವರು ಬಡುಗಡೆಗೊಳಿಸಿ ಶುಭ ಹಾರೈಸಿದರು.
ಹಿರಿಯ ಪತ್ರಕರ್ತ ಅನಂತ ಹುದಂಗಜೆ ರಚಿಸಿದ ಪುಸ್ತಕದಲ್ಲಿ ಸಿರಿಧಾನ್ಯಗಳ ಬಳಕೆಯೊಂದಿಗೆ ಆರೋಗ್ಯ ಭಾಗ್ಯ ರಕ್ಷಣೆ ಬಗ್ಗೆ ಸಮಗ್ರ ಮಾಹಿತಿ, ಮಾರ್ಗದರ್ಶನ ನೀಡಿದ್ದಾರೆ.
ಗ್ರಾಮಾಭಿವೃದ್ಧಿ ಯೋಜನೆ ಕಾರ್ಯನಿರ್ವಾಹಕ ನಿರ್ದೇಶಕ ಎಸ್.ಎಸ್. ಅನಿಲ್ ಕುಮಾರ್, ಹಣಕಾಸು ಅಧಿಕಾರಿ ಶಾಂತಾರಾಮ ಪೈ, ಪ್ರಾದೇಶಿಕ ನಿರ್ದೇಶಕ ಮನೋಜ್ ಮಿನೇಜಸ್, ಹಿರಿಯ ನಿರ್ದೇಶಕ ದಿನೇಶ್ ಎಂ., ಅಭಿನಂದನ್ ಜೈನ್ ಮತ್ತು ಕೃತಿಯ ಲೇಖಕ ಅನಂತ ಹುದಂಗಜೆ ಉಪಸ್ಥಿತರಿದ್ದರು.