Ullal: ಮನೆಗೆ ನುಗ್ಗಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳವು

Ullal: ಮನೆಗೆ ನುಗ್ಗಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳವು

ಉಳ್ಳಾಲ: ಮನೆಗೆ ನುಗ್ಗಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳವುಗೈದ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯ ಕೊಲ್ಯ ಎಂಬಲ್ಲಿ ನಡೆದಿದೆ.

ಕೊಲ್ಯ ನಿವಾಸಿ ಗುರುರಾಜ್ ಅವರ ಮನೆಯಲ್ಲಿ ಕಳ್ಳತನ ನಡೆದಿದೆ.

ಘಟನೆ ವಿವರ: ಗುರುರಾಜ್ ದಂಪತಿ ಖಾಸಗಿ ಸಂಸ್ಥೆಯೊಂದರಲ್ಲಿ ಕೆಲಸಕ್ಕಿದ್ದು, ಅವರು ಎಂದಿನಂತೆ ಬೆಳಿಗ್ಗೆ ಮನೆಗೆ ಬೀಗ ಹಾಕಿ ಕೆಲಸಕ್ಕೆ ಹೋಗಿದ್ದರು. ಈ ದಂಪತಿ ಬೆಳಿಗ್ಗೆ 6.30 ಗಂಟೆಗೆ ಮನೆಗೆ ಬೀಗ ಹಾಕಿ ತೆರಳಿದರೆ ರಾತ್ರಿ 8.30 ವೇಳೆಗೆ ಮನೆ ಸೇರುತ್ತಿದ್ದರು. ಎಂದಿನಂತೆ ಮಂಗಳವಾರ ಬೆಳಗ್ಗೆ ಕೆಲಸಕ್ಕೆ ತೆರಳಿದ ದಂಪತಿ ರಾತ್ರಿ ವೇಳೆ ಮನೆಗೆ ಬಂದಾಗ ಈ ಘಟನೆ ಬೆಳಕಿಗೆ ಬಂದಿದೆ. ಮನೆಯ ಮುಂಬಾಗಿಲಿನ ಬೀಗ ಒಡೆದು ಒಳನುಗ್ಗಿದ ಕಳ್ಳರು ಕಪಾಟು ಜಾಲಾಡಿ ಒಂದೂವರೆ ಲಕ್ಷ ಮೌಲ್ಯದ ಚಿನ್ನಾಭರಣ ಕಳವುಗೈದಿದ್ದಾರೆ ಎಂದು ತಿಳಿದು ಬಂದಿದೆ. 

ಘಟನಾ ಸ್ಥಳಕ್ಕೆ ಉಳ್ಳಾಲ ಪೊಲೀಸರು, ಬೆರಳಚ್ಚು ತಜ್ಞರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಈ ಪ್ರಕರಣದ ತನಿಖೆಗೆ ಪೊಲೀಸರ ತಂಡ ನೇಮಕ ಮಾಡಲಾಗಿದೆ. ಈ ಬಗ್ಗೆ ಗುರುರಾಜ್ ನೀಡಿದ ದೂರಿನಂತೆ ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಮೂಡುಬಿದಿರೆ ಮೂಲದ ಈ ಕುಟುಂಬ ಕಳೆದ ನಾಲ್ಕು ವರ್ಷಗಳಿಂದ ಕೊಲ್ಯದಲ್ಲಿ ನೆಲೆಸಿದ್ದರು. 

ಉಳ್ಳಾಲ ವ್ಯಾಪ್ತಿಯಲ್ಲಿ ಕಳ್ಳತನ ಜಾಸ್ತಿ ಆಗಿದ್ದು, ಈ ಹಿನ್ನೆಲೆಯಲ್ಲಿ ಮನೆಗೆ ಬೀಗ ಹಾಕಿ ತೆರಳುವ ಕುಟುಂಬ ತಮ್ಮ ಅಮೂಲ್ಯವಾದ ವಸ್ತು ತೆಗೆದುಕೊಂಡು ಹೋಗಿ. ಇಲ್ಲದಿದ್ದರೆ ಮನೆಯಲ್ಲಿ ಒಬ್ಬರನ್ನು ಬಿಟ್ಟು ಹೋಗಬೇಕು. ಮನೆ ಬಳಿ ಅಪರಿಚಿತರು ಬಂದರೆ ಸಂಶಯ ಬಂದಲ್ಲಿ ಠಾಣೆಗೆ ಕರೆ ಮಾಡಿ ಮಾಹಿತಿ ನೀಡುವಂತೆ ಉಳ್ಳಾಲ ಠಾಣಾ ಇನ್‌ಸ್ಪೆಕ್ಟರ್ ಬಾಲಕೃಷ್ಣ ತಿಳಿಸಿದ್ದಾರೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article