ಅಂಗನವಾಡಿ ಕಾರ್ಯಕರ್ತೆಯರ ಹುದ್ದೆಗೆ ಅರ್ಜಿ ಆಹ್ವಾನ

ಅಂಗನವಾಡಿ ಕಾರ್ಯಕರ್ತೆಯರ ಹುದ್ದೆಗೆ ಅರ್ಜಿ ಆಹ್ವಾನ


ಬಂಟ್ವಾಳ: ದ.ಕ. ಜಿಲ್ಲೆಯ ಬಂಟ್ವಾಳ ಶಿಶು ಅಭಿವೃದ್ಧಿ ಯೋಜನೆಯಲ್ಲಿ ಖಾಲಿಯಿರುವ ಒಟ್ಟು 09 ಅಂಗನವಾಡಿ ಕಾರ್ಯಕರ್ತೆಯರ ಹುದ್ದೆಗಳಿಗೆ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಕಾವಳಮೂಡೂರಿನ ಕಾವಳಕಟ್ಟೆ ಶಾಲೆ, ಮೂಡನಡುಗೋಡಿನ ಸಾಸ್ತಾನ, ಬಿ. ಮೂಡ ಗ್ರಾಮದ ಕೊಡಂಗೆ, ಸಜೀಪಮೂಡ ಗ್ರಾಮದ ಪಣೋಲಿಬೈಲ್, ಅಮ್ಟಾಡಿ ಗ್ರಾಮದ ಲೊರೆಟ್ಟೋ, ಸಜೀಪಪಡು ಕೋಟೆಕಣಿ ಸಮಾಜಮಂದಿರ, ಸಜೀಪನಡು ಗ್ರಾಮದ ಗ್ರಾಮದ ಲಕ್ಷ್ಮಣಕಟ್ಟೆ, ಪುದು ಗ್ರಾಮದ ನೆತ್ತರಕೆರೆ ಅಂಗನವಾಡಿ ಕೇಂದ್ರಗಳಿಗೆ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದ್ದು, ಸೆ.29 ಅರ್ಜಿಸಲ್ಲಿಕೆಗೆ ಕೊನೆದಿನವಾಗಿದೆ. ಹೆಚ್ಚಿನ ಮಾಹಿತಿಗಾಗಿ ಬಂಟ್ವಾಳ ಶಿಶು ಅಬಿವೃದ್ಧಿ ಇಲಾಖೆಯನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article