ಆಧಾರ್ ಜೋಡಣೆಗೆ ಶುಲ್ಕ ಪಾವತಿಸುವ ಅವಶ್ಯಕತೆ ಇಲ್ಲ
Tuesday, August 13, 2024
ಮಂಗಳೂರು: ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣಾ ಆಯೋಗದ ನಿರ್ದೇಶನದಂತೆ ರೈತರ ಕೃಷಿ ನೀರಾವರಿ ಪಂಪುಸೆಟ್ಗಳಿಗೆ ಆಧಾರ್ ಜೋಡಣೆ ಮಾಡುವ ಕಾರ್ಯವು ಪ್ರಗತಿಯಲ್ಲಿರುತ್ತದೆ. ಸದರಿ ಕಾರ್ಯಕ್ಕೆ ಮೆಸ್ಕಾಂಗೆ ಡೆಪಾಸಿಟ್, ಕರಾರು ಪತ್ರ ಮತ್ತು ಅರ್ಜಿ ಶುಲ್ಕವನ್ನು ಪಡೆದುಕೊಳ್ಳುತ್ತಿರುವುದಾಗಿ/ ಹಲವಾರು ರೈತರಿಂದ ದೂರುಗಳು ಬಂದಿರುತ್ತದೆ.
ಕೃಷಿ ನೀರಾವರಿ ಪಂಪುಸೆಟ್ಗಳಿಗೆ ಆಧಾರ್ ಜೋಡಣೆ ಕಾರ್ಯವನ್ನು ಮೆಸ್ಕಾಂನ ಅಧಿಕಾರಿಗಳು ನಿರ್ವಹಿಸುತ್ತಿದ್ದು, ಸದರಿ ಪ್ರಕ್ರಿಯೆಗೆ ಯಾವುದೇ ಶುಲ್ಕ ಪಾವತಿಸುವ ಅವಶ್ಯಕತೆ ಇರುವುದಿಲ್ಲ ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ಸ್ಪಷ್ಟ ಪಡಿಸಿದೆ.