ಡಾ. ಎಂ.ಎನ್. ರಾಜೇಂದ್ರ ಕುಮಾರ್‌ಗೆ ಸನ್ಮಾನ
Tuesday, August 20, 2024
ಮಂಗಳೂರು: ಸುಳ್ಯ ತಾಲೂಕಿನ ಉಬರಡ್ಕ ಮಿತ್ತೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವತಿಯಿಂದ ಎಸ್ ಸಿಡಿಸಿಸಿ ಬ್ಯಾಂಕ್ ಹಾಗೂ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳದ ಅಧ್ಯಕ್ಷ ’ಸಹಕಾರ ರತ್ನ ’ ಡಾ. ಎಂ. ಎನ್. ರಾಜೇಂದ್ರ ಕುಮಾರ್ ಅವರನ್ನು ಸೋಮವಾರ ಎಸ್‌ಸಿಡಿಸಿಸಿ ಬ್ಯಾಂಕ್ ನಲ್ಲಿ ಸನ್ಮಾನಿಲಾಯಿತು.
ಉಬರಡ್ಕ ಮಿತ್ತೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಕಟ್ಟಡ ’ಸಿರಿ ಸಹಕಾರ ಸೌಧ’ ಉದ್ಘಾಟನೆಯ ನೆನಪಿಗಾಗಿ ಸಂಘದ ಅಧ್ಯಕ್ಷರಾದ ದಾಮೋದರ ಗೌಡ ಮದುವೆಗದ್ದೆ ಅವರು ಡಾ. ಎಂ. ಎನ್. ರಾಜೇಂದ್ರ ಕುಮಾರ್ ಅವರನ್ನು ಆಡಳಿತ ಮಂಡಳಿಯ ಪರವಾಗಿ ಸನ್ಮಾನಿಸಿದರು.
ಎಸ್‌ಸಿಡಿಸಿಸಿ ಬ್ಯಾಂಕಿನ ನಿರ್ದೇಶಕರಾದ ಶಶಿಕುಮಾರ್ ರೈ ಬಾಲ್ಯೋಟ್ಟು, ಸಂಘದ ಉಪಾಧ್ಯಕ್ಷರಾದ ರಾಜೇಶ್ ಭಟ್ ನೆಕ್ಕಿಲ, ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಯಪ್ರಕಾಶ್ ಉರುಂಡೆ ಹಾಗೂ ಸಂಘದ ನಿರ್ದೇಶಕರೆಲ್ಲರೂ ಉಪಸ್ಥಿತರಿದ್ದರು.