ಶೆಡ್ಡಿಗೆ ಪೊಲೀಸ್ ದಾಳಿ: ಉಲಾಯಿ-ಪಿದಾಯಿ ಆಟದಲ್ಲಿ ನಿರತರಾದ 23 ಮಂದಿಯ ಬಂಧನ
Saturday, September 21, 2024
ಬಂಟ್ವಾಳ: ಮಾಲಾಡಿ ಗ್ರಾಮದ ಮಡಂತ್ಯಾರು ಪೇಟೆಯ ಬಳಿ ಶೆಡ್ಡೊಂದರ ಒಳಗೆ ನಡೆಯುತ್ತಿದ್ದ ಅಕ್ರಮ ಜೂಜಾಟ ಅಡ್ಡೆಗೆ ದಾಳಿ ನಡೆಸಿದ ಪೂಂಜಾಲಕಟ್ಟೆ ಪೊಲೀಸ್ ಠಾಣಾ ಪೊಲೀಸರು ದಾಳಿ ನಡೆಸಿ ಉಲಾಯಿ-ಪಿದಾಯಿಆಟದಲ್ಲಿ ನಿರತರಾಗಿದ್ದ 23 ಮಂದಿ ಆರೋಪಿಗಳನ್ನು ದಸ್ತಗಿರಿ ಮಾಡಿದ್ದಾರೆ.
ಈ ಸಂದರ್ಭ ಜುಗಾರಿ ದಂಧೆ ನಡೆಸುತ್ತಿದ್ದಾತ ಪೊಲೀಸರ ಕೈಗೆ ಸಿಗದೆ ಪರಾರಿಯಾಗಿದ್ದಾನೆ ಎಂದು ತಿಳಿದು ಬಂದಿದೆ. ಪುಂಜಾಲಕಟ್ಟೆ ಠಾಣೆಯ ಪಿಎಸ್‌ಐ ನಂದಕುಮಾರ್ ನೇತೃತ್ವದ ಪೊಲೀಸರು ಖಚಿತ ವರ್ತಮಾನದ ಮೇರೆಗೆ ಈ ದಾಳಿ ಕಾರ್ಯಾಚರಣೆ ನಡೆಸಿದ್ದಾರೆ.
ಬಂಧತರಿಂದ ನಗದು ಸಹಿತ ಸುಮಾರು 36,729 ರೂ. ಮೌಲ್ಯದ ಸೊತ್ತುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಈ ಬಗ್ಗೆ ಪ್ರಕರಣ ದಾಖಲಿಸಿರುವ ಪೊಲೀಸರು ಮುಂದಿನ ತನಿಖೆ ನಡೆಸುತ್ತಿದ್ದಾರೆ.