ಕೂಲಿ ಕಾರ್ಮಿಕ ಆತ್ಮಹತ್ಯೆ

ಕೂಲಿ ಕಾರ್ಮಿಕ ಆತ್ಮಹತ್ಯೆ

ಬಂಟ್ವಾಳ: ವಿಪರೀತ ಕುಡಿತದ ಚಟ ಹೊಂದಿದ್ದ ಕೂಲಿ ಕಾರ್ಮಿಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ ಪಂಜಿಕಲ್ಲು ಗ್ರಾಮದ ಕೊಳಕಿಲೋಡಿ ಎಂಬಲ್ಲಿ ಇಂದು ನಡೆದಿದೆ.

ಕೊಳಕಿಲೋಡಿ ನಿವಾಸಿ ಹೊನ್ನಪ್ಪ ಗೌಡ (64) ಆತ್ಮಹತ್ಯೆ ಮಾಡಿಕೊಂಡವರಾಗಿದ್ದಾರೆ. ವಿಪರೀತ ಕುಡಿತದ ಚಟ ಹೊಂದಿದ್ದ ಅವರು ಇತ್ತೀಚೆಗೆ ಸರಿಯಾಗಿ ಕೆಲಸಕ್ಕೆ ಹೋಗದೆ ಮನೆಯಲ್ಲಿರುತ್ತಿದ್ದರು.ಹಾಗಾಗಿ ಕುಡಿಯಲು ಹಣ ಇಲ್ಲದೆ ಮಾನಸಿಕವಾಗಿ ನೊಂದು  ಮನೆ ಸಮೀಪದ ಮರವೊಂದಕ್ಕೆ ಲುಂಗಿಯಿಂದ  ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಈ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಗೆ ಇವರ ಮಗ ಮನೋಜ್ ನೀಡಿದ ದೂರಿನಂತೆ ಕೇಸು ದಾಖಲಾಗಿದೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article