ರಘ ಸಪಲ್ಯ ನಿಧನ

ರಘ ಸಪಲ್ಯ ನಿಧನ


ಬಂಟ್ವಾಳ: ಪಾಣೆಮಂಗಳೂರು ನಿವಾಸಿ, ಬೀಡಿ ಉದ್ಯಮಿ ಬಂಟ್ವಾಳ ತಾಲೂಕು ಗಾಣಿಗರ ಸೇವಾ ಸಂಘದ ಅಧ್ಯಕ್ಷ ಬಿ. ರಘು ಸಪಲ್ಯ (77) ಶುಕ್ರವಾರ ಮುಂಜಾನೆ ಸ್ವಗೃಹದಲ್ಲಿ ಹೃದಯಾಘಾತದಿಂದ ನಿಧನರಾದರು.

ಮೃತರು ಪತ್ನಿ, ಪುತ್ರ ಮತ್ತು ಮೂವರು ಪುತ್ರಿಯರು ಇದ್ದಾರೆ.

ವೃತ್ತಿಯಲ್ಲಿ ಟೈಲರ್ ಆಗಿರುವ ಇವರು ಆರ್‌ಎಸ್‌ಎಸ್ ಹಿರಿಯ ಕಾರ್ಯಕರ್ತರಾಗಿ, ತುರ್ತು ಪರಿಸ್ಥಿತಿ ವಿರುದ್ಧ ಹೋರಾಟಗಾರರಾಗಿ, ಪಾಣೆಮಂಗಳೂರು ಸುಮಂಗಲಾ ಕ್ರೆಡಿಟ್ ಸೊಸೈಟಿ ಅಧ್ಯಕ್ಷರಾಗಿ, ಬಂಟ್ವಾಳ ನಗರ ಪಂಚಾಯತ್ ಸದಸ್ಯರಾಗಿ, ವಿವಿಧ ದೇವಸ್ಥಾನಗಳ ಜೀರ್ಣೋದ್ಧಾರ ಕಾರ್ಯದಲ್ಲಿ ತನ್ನನ್ನು ತಾನು ತೊಡಗಿಸಿಕೊಂಡದ್ದಲ್ಲಧ ವಿಶೇಷ ಕೊಡುಗೆ ಸಲ್ಲಿಸಿದ್ದರು.

ಪುತ್ತೂರು ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಪ್ರಭಾಕರ ಭಟ್, ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್, ಬಿಜೆಪಿ ಮುಖಂಡರಾದ ದೇವದಾಸ ಶೆಟ್ಟಿ, ಮಾಧವ ಮಾವೆ, ಮಾಜಿ ಸಚಿವ ಬಿ. ರಮಾನಾಥ ರೈ, ಮಾಜಿ ಶಾಸಕರಾದ ಎ. ರುಕ್ಮಯ ಪೂಜಾರಿ, ಕೆ. ಪದ್ಮನಾಭ ಕೊಟ್ಟಾರಿ, ಕಿಯೋನಿಕ್ಸ್ ಮಾಜಿ ಅಧ್ಯಕ್ಷ ಕೆ. ಹರಿಕೃಷ್ಣ ಬಂಟ್ವಾಳ್, ಬಿಜೆಪಿ ಕ್ಷೇತ್ರಾಧ್ಯಕ್ಷ ಆರ್. ಚೆನ್ನಪ್ಪ ಕೋಟ್ಯಾನ್, ಮುಂಬೈ ಗಾಣಿಗ ಸಂಘದ ಅಧ್ಯಕ್ಷ ಶ್ರೀನಿವಾಸ ಪಿ. ಸಪಲ್ಯ, ಜಿಲ್ಲಾ ಗಾಣಿಗ ಸಂಘದ ಅಧ್ಯಕ್ಷ ವಿಶ್ವಾಸ್ ಕುಮಾರ್ ದಾಸ್, ವಿಶ್ವಕರ್ಮ ಸಮಾಜ ಸೇವಾ ಸಂಘದ ಅಧ್ಯಕ್ಷ ಸುಧಾಕರ ಆಚಾರ್ಯ, ಬಿಲ್ಲವ ಸಮಾಜ ಸೇವಾ ಸಂಘದ ಉಪಾಧ್ಯಕ್ಷ ಭುವನೇಶ್ ಪಚ್ಚಿನಡ್ಕ, ಜಿ.ಪಂ. ಮಾಜಿ ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ, ನ್ಯಾಯವಾದಿ ಅಶ್ವನಿಕುಮಾರ್ ರೈ, ಅತ್ತಾವರ ಉಮಾಮಹೇಶ್ವರ ಕ್ಷೇತ್ರದ ಆಡಳಿತ ಮೊಕ್ತೇಸರ ಕೇಶವ ಮಳಲಿ, ವಗ್ಗ ಕಾಡಬೆಟ್ಟು ಪಿಲಿಂಗಾಲು ಶ್ರೀ ಗಾಯತ್ರಿ ದೇವಿ ದೇವಸ್ಥಾನ ಆಡಳಿತ ಧರ್ಮದರ್ಶಿ ಕೆ.ಎಸ್. ಪಂಡಿತ್, ಉದ್ಯಮಿ ರಘ ಸೋಮಯಾಜಿ, ಮೊಗರ್ನಾಡು ಲಕ್ಷ್ನೀ ನರಸಿಂಹ ದೇವಸ್ಥಾನದ ಜನಾರ್ದನ ಭಟ್ ಮೊದಲಾದ ಹಲವಾರು ಗಣ್ಯರು ಮೃತರ ಅಂತಿಮ ದರ್ಶನ ಪಡೆದು ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರು ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article