ನಾಳೆ ಸೈಕಲ್ ಜಾಥಾ ‘ಯೋಧ-2024’
ಕುಂದಾಪುರ: ಇಲ್ಲಿನ ರೂರಲ್ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಕೋಟೇಶ್ವರ, ಕುಂದಾಪುರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಕುಂದಾಪುರ, ಎಂ.ಜಿ. ಫ್ರೆಂಡ್ಸ್ ಕುಂಭಾಸಿ, ವಿಶ್ವಹಿಂದೂ ಪರಿಷತ್ ಹಾಗೂ ಭಜರಂಗದಳ ತೆಕ್ಕಟ್ಟೆ ಘಟಕ, ಸೈಕಲ್ ಅಸೋಸಿಯೇಶನ್ ಕುಂದಾಪುರ ಇವರ ಸಹಯೋಗದೊಂದಿಗೆ ವಿಶ್ವ ಹೃದಯ ದಿನಾಚರಣೆ ಹಾಗೂ ಈ ಪ್ರಯುಕ್ತ ಸೆ.29 ರಂದು ಸೈಕಲ್ ಜಾಥಾ ‘ಯೋಧ-2024’ ಕಾರ್ಯಕ್ರಮ ನಡೆಯಲಿದೆ.
ಬೆಳಗ್ಗೆ 6.30ಕ್ಕೆ ಕುಂದಾಪುರ ಶಾಸ್ತ್ರೀ ವೃತ್ತದಲ್ಲಿ ಉಡುಪಿ-ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಸೈಕಲ್ ಜಾಥಾಕ್ಕೆ ಚಾಲನೆ ನೀಡಲಿದ್ದಾರೆ.
ಬಳಿಕ ಕುಂದಾಪುರದಿಂದ ಕುಂಭಾಸಿ ತನಕ ಜಾಥಾವು ಸಾಗಿ ಬಂದು, ಬೆಳಿಗ್ಗೆ 9 ಗಂಟೆಗೆ ಕುಂಭಾಸಿ ಶ್ರೀ ಸಿದ್ಧಿವಿನಾಯಕ ದೇವಸ್ಥಾನದಲ್ಲಿ ಸಮಾರೋಪ ಸಮಾರಂಭ ನಡೆಯಲಿದೆ.
ಶಾಸಕ ಕಿರಣ್ ಕುಮಾರ್ ಕೊಡ್ಗಿ, ಕುಂದಾಪುರ ಡಿವೈಎಸ್ಪಿ ಕೆ.ಯು. ಬೆಳ್ಳಿಯಪ್ಪ, ಕುಂದಾಪುರ ಪುರಸಭಾ ಅಧ್ಯಕ್ಷ ಮೋಹನ್ ದಾಸ್ ಶೆಣೈ, ಗೀತಾನಂದ ಫೌಂಡೇಶನ್ ಪ್ರವರ್ತಕ ಆನಂದ ಸಿ. ಕುಂದರ್, ಕುಂದಾಪುರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ನಾಗರಾಜ ರಾಯಪ್ಪನ ಮಠ ಸೇರಿದಂತೆ ಇನ್ನಿತರ ಗಣ್ಯರು ಭಾಗವಹಿಸಲಿದ್ದಾರೆ ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.