ಅ.3 ರಿಂದ 12 ರವರೆಗೆ ಶ್ರೀ ಬಗಳಾಂಬ ತಾಯಿ ದೇವಸ್ಥಾನದಲ್ಲಿ ಶರನ್ನವರಾತ್ರಿ ಉತ್ಸವ

ಅ.3 ರಿಂದ 12 ರವರೆಗೆ ಶ್ರೀ ಬಗಳಾಂಬ ತಾಯಿ ದೇವಸ್ಥಾನದಲ್ಲಿ ಶರನ್ನವರಾತ್ರಿ ಉತ್ಸವ


ಕುಂದಾಪುರ: ಚಿಕ್ಕನ್‌ಸಾಲ್ ರಸ್ತೆಯ ಶ್ರೀ ಬಗಳಾಂಬ ತಾಯಿ ದೇವಸ್ಥಾನದಲ್ಲಿ ಶರನ್ನವರಾತ್ರಿ ಮಹೋತ್ಸವ ಅ.3 ರಿಂದ 12ರವರೆಗೆ ಜರುಗಲಿದೆ.

ಅ.3 ರಂದು ಬೆಳಗ್ಗೆ ಕಲಶ ಸ್ಥಾಪನೆಯೊಂದಿಗೆ ಉತ್ಸವಕ್ಕೆ ಚಾಲನೆ ದೊರಕಲಿದ್ದು, ಅಮ್ಮನವರಿಗೆ ವಿಶೇಷ ಅಲಂಕಾರ, ಮಧ್ಯಾಹ್ನ ಮಹಾ ಪೂಜೆ, ಮಂಗಳಾರತಿ, ತೀರ್ಥಪ್ರಸಾದ ವಿತರಣೆ, ಅನ್ನಸಂತರ್ಪಣೆ, ಸಂಜೆ ಸ್ಥಳೀಯ ಭಜನಾ ಮಂಡಳಿ ಅವರಿಂದ ಭಜನಾ ಕಾರ್ಯಕ್ರಮ ಜರುಗಲಿದೆ.  

ಅ.4 ರಿಂದ 9 ರವರೆಗೆ ಪ್ರತಿದಿನ ಅಮ್ಮನವರಿಗೆ ವಿಶೇಷ ಅಲಂಕಾರ, ಮಧ್ಯಾಹ್ನ ಮಹಾಪೂಜೆ, ಮಂಗಳಾರತಿ, ತೀರ್ಥಪ್ರಸಾದ ವಿತರಣೆ, ಅನ್ನಸಂತರ್ಪಣೆ, ಸಂಜೆ ಸ್ಥಳೀಯ ಭಜನಾ ಮಂಡಳಿಯವರಿಂದ ಭಜನಾ ಕಾರ್ಯಕ್ರಮ.

 ಅ.10 ರಂದು ಬೆಳಗ್ಗೆ 9 ಗಂಟೆಗೆ ಪುಣ್ಯಾಹ, ಗಣಪತಿ ಪೂಜೆ,  "ಸಾಮೂಹಿಕ ಚಂಡಿಕಾಯಾಗ", ಮಧ್ಯಾಹ್ನ 12.30ಕ್ಕೆ ಪೂರ್ಣಾಹುತಿ, ಮಹಾಪೂಜೆ, ತೀರ್ಥಪ್ರಸಾದ ವಿತರಣೆ ಬಳಿಕ ಸಾರ್ವಜನಿಕ "ಮಹಾ ಅನ್ನಸಂತರ್ಪಣೆ" ನಡೆಯಲಿದೆ. 

ಅ.11 ರಂದು ರಾತ್ರಿ 8 ಗಂಟೆಗೆ "ಮಹಾ ರಂಗಪೂಜೆ" ಹಾಗೂ ಅ. 12 ರಂದು ಬೆಳಿಗ್ಗೆ ಕಲಶ ವಿಸರ್ಜನೆ ನಡೆಯಲಿದೆ.

ನವರಾತ್ರಿ ಸಂದರ್ಭ ಪ್ರತಿದಿನ ತಾಯಿಗೆ ಹರಕೆ ಬಂದ ಸೀರೆಗಳ ಏಲಂ ನಡೆಯಲಿದೆ. ಈ ಎಲ್ಲಾ ಧಾರ್ಮಿಕ ಕಾಠ್ಯಕ್ರಮಗಳು ಮರಕಡ ಶ್ರೀ ಗುರುಪರಾಶಕ್ತಿ ಮಠದ ಶ್ರೀ ನರೇಂದ್ರನಾಥ ಯೋಗಿಶ್ವರೇಶ್ವರ ಸ್ವಾಮೀಜಿ ಅನುಗ್ರಹದೊಂದಿಗೆ ವೇ.ಮೂ. ಚಂದ್ರಶೇಖರ್ ಸೋಮಯಾಜಿ ಕೋಟ ಇವರ ನೇತೃತ್ವದಲ್ಲಿ ಜರುಗಲಿದೆ ಎಂದು ದೇವಳದ ಪ್ರಕಟಣೆಯಲ್ಲಿ ತಿಳಿಸಿದೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article