ಸೆ.7 ರಿಂದ 11 ರವರೆಗೆ ಕುಂದಾಪುರ-ಖಾರ್ವಿಕೇರಿ ಶ್ರೀ ಮಹಾಕಾಳಿ ದೇವಸ್ಥಾನದಲ್ಲಿ 34ನೇ ವರ್ಷದ ಗಣೇಶೋತ್ಸವ ಆಚರಣೆ
ಕುಂದಾಪುರ: ಇಲ್ಲಿನ ಖಾರ್ವಿಕೇರಿಯ ಶ್ರೀ ಮಹಾಕಾಳಿ ದೇವಸ್ಥಾನದ 34ನೇ ವರ್ಷದ ಗಣೇಶೋತ್ಸವ ಆಚರಣೆಯು ಸೆ.7 ರಿಂದ ಆರಂಭಗೊಂಡು ಸೆ.11ರ ವರೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಜರಗಲಿದೆ.
ಸೆ.7 ರಂದು ಬೆಳಿಗ್ಗೆ 9.30ಕ್ಕೆ ಗಣೇಶನ ವಿಗ್ರಹ ಪ್ರತಿಷ್ಠೆ, 11.30ಕ್ಕೆ ಗಣಹೋಮ, ಮಧ್ಯಾಹ್ನ 12.30ಕ್ಕೆ ಮಹಾಪೂಜೆ, ಮಂಗಳಾರತಿ, ಪ್ರಸಾದ ವಿತರಣೆ. ಸಂಜೆ ಭಜನಾ ಕಾರ್ಯಕ್ರಮ, ರಾತ್ರಿ 8 ಗಂಟೆಗೆ ರಂಗಪೂಜೆ, ಪ್ರಸಾದ ವಿತರಣೆ ನಡೆಯಲಿದೆ.
ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಸೆ.7 ರಂದು ಬೆಳಿಗ್ಗೆ 10 ಗಂಟೆಗೆ ತಾಲೂಕು ಮಟ್ಟದ 'ಗಣೇಶನ ಚಿತ್ರ ಬಿಡಿಸುವ ಸ್ಪರ್ಧೆ' ಹಾಗೂ ಸಂಜೆ 4 ಗಂಟೆಗೆ ಕರೋಕೆ 'ಭಕ್ತಿಗೀತೆ ಗಾಯನ ಸ್ಪರ್ಧೆ' ನಡೆಯಲಿದೆ.
ಸೆ.8 ರಿಂದ 11ರ ತನಕ ಪ್ರತಿದಿನ ಬೆಳಿಗ್ಗೆ ಗಣಹೋಮ, ಮಧ್ಯಾಹ್ನ ಮಹಾಪೂಜೆ, ಮಂಗಳಾರತಿ, ಸಂಜೆ ಸ್ಥಳೀಯ ಭಜನಾ ಮಂಡಳಿಯವರಿಂದ ಭಜನಾ ಕಾರ್ಯಕ್ರಮ, ರಾತ್ರಿ ರಂಗಪೂಜೆ, ಪ್ರಸಾದ ವಿತರಣೆ ನಡೆಯಲಿದೆ.
ಸೆ.11 ರಂದು ಗಣೇಶೋತ್ಸವದ ವಿಸರ್ಜನೆಯ ಪ್ರಯುಕ್ತ ಬೆಳಿಗ್ಗೆ ಗಣಹೋಮ, ಮಧ್ಯಾಹ್ನ ಮಹಾ ಪೂಜೆ ಬಳಿಕ 'ಸಾರ್ವಜನಿಕ ಅನ್ನಸಂತರ್ಪಣೆ' ಕಾರ್ಯಕ್ರಮ ಸೇವಾಕರ್ತರಿಂದ ನಡೆಯಲಿದೆ. ಸಂಜೆ 4 ಗಂಟೆಗೆ ಶ್ರೀ ಗಣೇಶನ ವಿಗ್ರಹವನ್ನು ಪುರಮೆರವಣಿಗೆಯೊಂದಿಗೆ ಶಾಸ್ತ್ರೀ ವೃತ್ತದವರೆಗೆ ಸಾಗಿ ಪುಣ್ಯನದಿ ಪಂಚ ಗಂಗಾವಳಿಯ ಮಡಿಲಲ್ಲಿ ಜಲಸ್ಥಂಭನ ಮಾಡಲಾಗುವುದು ಎಂದು ದೇವಳದ ಪ್ರಕಟಣೆ ತಿಳಿಸಿದೆ.
