ಕಾರಿಗೆ ಬಸ್ ಢಿಕ್ಕಿ: ಮೃತ್ಯು
Tuesday, September 24, 2024
ಕುಂದಾಪುರ: ಕಾರಿಗೆ ಬಸ್ಸು ಢಿಕ್ಕಿಯಾಗಿ ವ್ಯಕ್ತಿಯೊಬ್ಬರು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಮುಳ್ಳಿಕಟ್ಟೆ ಸಮೀಪ ಅರಾಟೆ ಸೇತುವೆ ಬಳಿ ಸೋಮವಾರ ರಾತ್ರಿ ಸಂಭವಿಸಿದೆ. ಮೃತರನ್ನು ಭಟ್ಕಳದ ನಾಜೀರ್ ಎಂದು ಗುರುತಿಸಲಾಗಿದೆ.
ಕುಟುಂಬದವರೊಂದಿಗೆ ಮಂಗಳೂರಿನಿಂದ ಭಟ್ಕಳಕ್ಕೆ ತೆರಳುತ್ತಿದ್ದ ವೇಳೆ ಕುಂದಾಪುರ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 66ರ ಅರಾಟೆ ಸೇತುವೆ ಸಮೀಪ ತಾಂತ್ರಿಕ ಕಾರಣದಿಂದ ಕಾರನ್ನು ನಿಲ್ಲಿಸಿ ಪರೀಕ್ಷಿಸಲಾಯಿತು. ನಂತರ ಅವರು ಕಾರಿಗೆ ಹತ್ತುವ ವೇಳೆ ಕುಂದಾಪುರದಿಂದ ಗಂಗೊಳ್ಳಿ ಕಡೆಗೆ ತೆರಳುತ್ತಿರುವ ಬಸ್ಸೊಂದು ಕಾರಿನ ಬಾಗಿಲಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ನಾಜೀರ್ ಅವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಕೂಡಲೇ ಅವರನ್ನು ಕುಂದಾಪುರದ ಖಾಸಗಿ ಆಸ್ಪತ್ರೆಗೆ ಸಾಗಿಸಲಾಯಿತು. ನಾಜೀರ್ ಅವರನ್ನು ಪರೀಕ್ಷಿಸಿದ ವೈದ್ಯರು ಮೃತಪಟ್ಟಿದ್ದಾರೆ ಎಂದು ತಿಳಿಸಿದ್ದಾರೆ. ಈ ಬಗ್ಗೆ ಗಂಗೊಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.