ಬೈಂದೂರು ಕ್ಷೇತ್ರದ ಮಾಜಿ ಶಾಸಕ ಕೆ. ಲಕ್ಷ್ಮೀ ನಾರಾಯಣ ನಿಧನ

ಬೈಂದೂರು ಕ್ಷೇತ್ರದ ಮಾಜಿ ಶಾಸಕ ಕೆ. ಲಕ್ಷ್ಮೀ ನಾರಾಯಣ ನಿಧನ


ಕುಂದಾಪುರ: ಬೈಂದೂರಿನ ಮಾಜಿ ಶಾಸಕ ಕೆ. ಲಕ್ಷ್ಮೀ ನಾರಾಯಣ (85) ಅವರು ಇಂದು ಬೆಳಿಗ್ಗೆ ಬೆಂಗಳೂರಿನಲ್ಲಿ ನಿಧನ ಹೊಂದಿದರು.

ಲಕ್ಷ್ಮಿ ನಾರಾಯಣ ಅವರು ಕೆಲ ಸಮಯಗಳಿಂದ ಬೆಂಗಳೂರಿನಲ್ಲೇ ವಾಸವಿದ್ದರು. ಕೆಲ ದಿನಗಳಿಂದ ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದರು ಎಂದು ತಿಳಿದುಬಂದಿದೆ.

2008ರಲ್ಲಿ ಬೈಂದೂರು ಕ್ಷೇತ್ರದಲ್ಲಿ ಶಾಸಕರಾಗಿ ಆಯ್ಕೆಯಾಗಿದ್ದರು. ಈ ಕ್ಷೇತ್ರದಲ್ಲಿ ಮೂರು ಭಾರಿ ಸ್ಪರ್ಧಿಸಿ ಎರಡು ಭಾರಿ ಸೋತಿದ್ದರು.

ಮೃತರು ಓರ್ವ ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article